ಕಾಬೂಲ್
ಇಲ್ಲಿನ ರಾಷ್ಟ್ರೀಯ ಭದ್ರತಾ ನಿರ್ದೇಶನಾಲಯದ(ಎನ್‌ಡಿಎಸ್) ಆವರಣದಲ್ಲಿ ಶುಕ್ರವಾರ ಸಂಭವಿಸಿದ ಅವಳಿ ಸ್ಫೋಟಗಳಲ್ಲಿ ಮೂವರು ಭದ್ರತಾ ಸಿಬ್ಬಂದಿ ಮೃತಪಟ್ಟಿದ್ದು, ಇಬ್ಬರಿಗೆ ಗಾಯವಾಗಿದೆ.
ಎನ್‌ಎಸ್‌ಡಿ ಸಿಬ್ಬಂದಿ ಸುಧಾರಿತ ಸ್ಫೋಟಕ ನಿಷ್ಕ್ರಿಯಗೊಳಿಸುತ್ತಿದ್ದ ವೇಳೆ, ಎಸ್‌ಎಸ್‌ಡಿ ಆವರಣದಲ್ಲಿಯೇ ಸ್ಫೋಟ ಸಂಭವಿಸಿದೆ. ಐಇಡಿ ನಿಷ್ಕ್ರಿಯಗೊಳಿಸುತ್ತಿದ್ದಾಗ ತಾಂತ್ರಿಕ ಸಮಸ್ಯೆಯಿಂದ ಈ ಸ್ಫೋಟ ಸಂಭವಿಸಿದ್ದು, ಮೂರು ಸಿಬ್ಬಂದಿ ಮೃತಪಟ್ಟಿದ್ದಾರೆ ಎಂದು ಎನ್‌ಎಸ್‌ಡಿ ಟ್ವಿಟ್ಟರ್‌ನಲ್ಲಿ ತಿಳಿಸಿದೆ.ವಾಹನವೊಂದಕ್ಕೆ ಜೋಡಿಸಿದ್ದ ಐಇಡಿ ನಿಷ್ಕ್ರಿಯಗೊಳಿಸುತ್ತಿದ್ದ ವೇಳೆ ಈ ಸ್ಫೋಟ ಸಂಭವಿಸಿದ್ದು, ಹೆರಾತ್‌ನ ಎನ್‌ಎಸ್‌ಡಿ ಆವರಣದಲ್ಲಿ ದುರ್ಘಟನೆ ನಡೆದಿದೆ ಎಂದು ಹೆರಾತ್ ಪ್ರಾಂತ್ಯದ ಗವರ್ನರ್ ಅವರ ವಕ್ತಾರರು ಖಚಿತಪಡಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ