ಚುನಾವಣೆ ಕಾರ್ಯದಿಂದ ಮುಕ್ತರಾದ ಮೂಡ್‍ನಲ್ಲಿ ಅಧಿಕಾರಿ ವರ್ಗ.

ಚಳ್ಳಕೆರೆ

         ಲೋಕಸಭೆ ಚುನಾವಣೆ ಈಗಾಗಲೇ ಮುಗಿದಿದ್ದು, ಕಳೆದ ಸುಮಾರು ಎರಡು ತಿಂಗಳುಗಳಿಂದ ಸರ್ಕಾರದ ಯಾವುದೇ ಇಲಾಖೆಗಳಲ್ಲಿ ಸಾರ್ವಜನಿಕ ಕೆಲಸಗಳು ನಿರೀಕ್ಷೆಯಂತೆ ವೇಗವಾಗಿ ಆಗುತ್ತಿರಲಿಲ್ಲ. ಈ ಹಿನ್ನೆಲೆಯಲ್ಲಿ ಚುನಾವಣೆ ಮುಗಿದ ನಂತರ ಕಚೇರಿಗಳು ಶನಿವಾರದಿಂದ ಕಾರ್ಯನಿರ್ವಹಿಸುತ್ತಿದ್ದು, ಗ್ರಾಮೀಣ ಜನರು ಸರ್ಕಾರ ವಿವಿಧ ಕಚೇರಿಗಳಲ್ಲಿ ತಮ್ಮ ಕೆಲಸ ಕಾರ್ಯಗಳಿಗಾಗಿ ಆಗಮಿಸಿದ್ದ ದೃಶ್ಯ ಸಾಮಾನ್ಯವಾಗಿತ್ತು.

       ಚುನಾವಣೆ ಹಿನ್ನೆಲೆಯಲ್ಲಿ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗ ನಿರಂತರವಾಗಿ ಚುನಾವಣಾ ಕಾರ್ಯದಲ್ಲಿ ತೊಡಗಿದ ಹಿನ್ನೆಲೆಯಲ್ಲಿ ಕೆಲವೊಂದು ಅವಶ್ಯದಾಖಲಾತಿಗಳನ್ನು ಪಡೆಯಲು ಸಾರ್ವಜನಿಕರಿಗೆ ತೊಂದರೆಯಾಗುತ್ತಿದ್ದು, ಈಗ ಚುನಾವಣೆ ಮುಗಿದಿದ್ದರಿಂದ ತಮ್ಮ ಕೆಲಸ ಕಾರ್ಯಗಳನ್ನು ಮಾಡಿಸಿಕೊಳ್ಳಲು ಅಧಿಕಾರಿಗಳ ಮೇಲೆ ಒತ್ತಡ ಹೇರಲು ಪ್ರಾರಂಭಿಸಿದ್ಧಾರೆ.
 

       ಕೇವಲ ಸಾರ್ವಜನಿಕರಿಗಷ್ಟೇಯಲ್ಲದೆ, ಅಧಿಕಾರಿಗಳು ಸಹ ಚುನಾವಣೆ ಕೆಲಸ ಕಾರ್ಯಗಳಲ್ಲಿ ಮಹತರ ಜವಾಬ್ದಾರಿಗಳನ್ನು ಹೊತ್ತು ಕಾರ್ಯನಿರ್ವಹಿಸಿರುವುದು ಮತದಾನ ಮುಗಿದ ಹಿನ್ನೆಲೆಯಲ್ಲಿ ತಮ್ಮ ಕೆಲಸ ಕಾರ್ಯಗಳತ್ತ ಗಮನ ನೀಡಲು ಪ್ರಾರಂಭಿಸಿದ್ಧಾರೆ. ಚುನಾವಣೆ ಹಿನ್ನೆಲೆಯಲ್ಲಿ ಅಧಿಕಾರಿಗಳು ಸಹ ಬಿಡುವಿಲ್ಲದೆ ಕಾರ್ಯನಿರ್ವಹಿಸಿದ್ದು, ಈಗ ಮತದಾನ ಶಾಂತಿಯುತವಾಗಿ ಮುಕ್ತಾಯವಾಗಿ ಎಲ್ಲಾ ಅಧಿಕಾರಿಗಳು ನಿಟ್ಟುಸಿರು ಬಿಟ್ಟಿದ್ಧಾರೆ.

        ಚಳ್ಳಕೆರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಲೋಪದೋಷಗಳಿಲ್ಲದೆ ಮತದಾನ ಪ್ರಕ್ರಿಯೆ ಮುಗಿದಿದ್ದು, ಎಲ್ಲಾ ಹಂತದಲ್ಲೂ ಕಾರ್ಯನಿರ್ವಹಿಸಿದ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗಕ್ಕೆ ತಹಶೀಲ್ದಾರ್ ತುಷಾರ್ ಬಿ.ಹೊಸೂರ್ ಕೃತಜ್ಞತೆಗಳನ್ನು ಸಲ್ಲಿಸಿದ್ಧಾರೆ. ಸಹಾಯಕ ಚುನಾವಣಾಧಿಕಾರಿ ಎಸ್.ರಾಜಶೇಖರ್ ಮಾರ್ಗದರ್ಶನದಲ್ಲಿ 24 ಸೆಕ್ಟರ್ ಅಧಿಕಾರಿಗಳು, ಎಫ್‍ಎಸ್‍ಟಿ ತಂಡ, ವಿವಿಟಿ ತಂಡ, ವಿವಿಧ ಚೆಕ್ ಪೋಸ್ಟ್‍ಗಳಲ್ಲಿ ಕಾರ್ಯನಿರ್ವಹಿಸಿದ ಎಲ್ಲರನ್ನೂ ಅವರು ಅಭಿನಂದಿಸಿ ಚುನಾವಣೆಯಲ್ಲಿ ಯಾವುದೇ ರೀತಿಯ ಸಮಸ್ಯೆಗಳು ಉಂಟಾಗದಂತೆ ಜಾಗ್ರತೆ ವಹಿಸಿದ ಎಲ್ಲರನ್ನೂ ಅಭಿನಂದಿಸಿದರಲ್ಲದೆ, ಉತ್ತಮ ರಕ್ಷಣೆ ಒದಗಿಸಿದ ಪೊಲೀಸ್ ಇಲಾಖೆ ಅಧಿಕಾರಿಗಳಿಗೂ ಸಹ ಅಭಿನಂದಿಸಿರುತ್ತಾರೆ.

          ಏ.18ರಂದು ನಡೆದ ಮತದಾನದಲ್ಲಿ ನಗರವೂ ಸೇರಿದಂತೆ ಗ್ರಾಮಾಂತರ ಪ್ರದೇಶದ ಹಲವಾರು ಮತಗಟ್ಟೆ ಕೇಂದ್ರಗಳಲ್ಲಿ ಮತದಾರರ ಹೆಸರು ಕೈಬಿಟ್ಟು ಹೋಗಿರುವುದು ಕೆಲವು ಮತದಾರರಿಗೆ ಅಸಮದಾನ ಉಂಟು ಮಾಡಿದೆ. ಕಳೆದ ಸುಮಾರು 40 ವರ್ಷಗಳಿಂದ ಚಳ್ಳಕೆರೆ ನಗರದಲ್ಲಿ ವಾಸವಿರುವ ನೃತ್ಯ ನಿಕೇತನದ ಸಂಚಾಲಕ ಯು.ಎಸ್.ವಿಷ್ಣುಮೂರ್ತಿರಾವ್ ಹಾಗೂ ಅವರ ಕುಟುಂಬದ ಮೂವರು ಸದಸ್ಯರ ಹೆಸರನ್ನು ಮತದಾರ ಪಟ್ಟಿಯಿಂದ ಕೈಬಿಟ್ಟಿದ್ದು, ಈ ಬಗ್ಗೆ ಅಸಮದಾನ ವ್ಯಕ್ತ ಪಡಿಸಿದ್ಧಾರೆ. ಮತಗಟ್ಟೆ ಕೇಂದ್ರಗಳಲ್ಲಿ ಮತದಾರರ ಪಟ್ಟಿ ಸಮೀಷೆ ಸಂದರ್ಭದಲ್ಲಿ ಸಂಬಂಧಪಟ್ಟ ಅಧಿಕಾರಿಗಳು ನಿರ್ಲಕ್ಷ್ಯೆ ವಹಿಸಿದ ಫಲವಾಗಿ ಹಲವಾರು ಮತದಾರರು ಮತದಾನದಿಂದ ವಂಚಿತರಾಗಿದ್ಧಾರೆ.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link