ಬೆಂಗಳೂರು
ದೇಶದಲ್ಲಿ ತಾವು 50 ಸಾವಿರ ಕೋಟಿ ರೂಪಾಯಿಯಷ್ಟು ಆಸ್ತಿ-ಪಾಸ್ತಿ ಹೊಂದಿರುವುದಾಗಿ ಬಿಜೆಪಿ ನಾಯಕರು ಮಾಡುತ್ತಿರುವ ಆರೋಪವನ್ನು ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅಲ್ಲಗಳೆದಿದ್ದಾರೆ.
ಅವರು ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಈ ಆರೋಪದ ಬಗ್ಗೆ ಕೇಂದ್ರ ಸರ್ಕಾರ ನಡೆಸುವ ಯಾವುದೇ ತನಿಖೆಯನ್ನು ಎದುರಿಸಲು ತಾವು ಸಿದ್ಧ ಎಂದು ಹೇಳಿದ್ದಾರೆ. ತಮ್ಮ 5 ದಶಕಗಳ ರಾಜಕೀಯ ಜೀವನಲ್ಲಿ ತಾವು ಎಂದೂ ಭ್ರಷ್ಟಾಚಾರದಲ್ಲಿ ತೊಡಗಿಲ್ಲ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
![](https://prajapragathi.com/wp-content/uploads/2019/02/Mallikarjun_Kharge_EPS.jpg)