ಬೆಂಗಳೂರು:
ರಾಜಕೀಯ ಲಾಭಕ್ಕಾಗಿ ಕಾಂಗ್ರೆಸ್ ಪಕ್ಷ ಹಿಂದುಳಿದ ಮತ್ತು ಅಲ್ಪ ಸಂಖ್ಯಾತ ಸಮುದಾಯವನ್ನು ಓಲೈಕೆ ಮಾಡಿಕೊಂಡೇ ರಾಜಕಾರಣ ಮಾಡುತ್ತಿದೆ ಎಂದು ಬಿಜೆಪಿ ಅಲ್ಪಸಂಖ್ಯಾತ ರಾಜ್ಯ ಘಟಕದ ಅಧ್ಯಕ್ಷ ಅಬ್ದುಲ್ ಅಜೀಂ ಹೇಳಿದ್ದಾರೆ.
ಶಿವಮೊಗ್ಗದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಆಪರೇಷನ್ ಕಮಲ ಮಾಡುತ್ತಿಲ್ಲ. ಅದರ ಅಗತ್ಯವೂ ಇಲ್ಲ. ಲೋಕಸಭಾ ಚುನಾವಣೆ ಮುಗಿದ ನಂತರ ಮೈತ್ರಿ ಪಕ್ಷಗಳಲ್ಲಿ ಭಿನ್ನಾಭಿಪ್ರಾಯ ತೀವ್ರಗೊಂಡು ಕಾಂಗ್ರೆಸ್ ಪಕ್ಷ ಜೆಡಿಎಸ್‍ಗೆ ನೀಡಿರುವ ಬೆಂಬಲವನ್ನು ಹಿಂದಕ್ಕೆ ಪಡೆಯಲಿದೆ ಎಂದು ಹೇಳಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
