ದಾವಣಗೆರೆ:
ಬಿಜೆಪಿ ಅಭ್ಯರ್ಥಿ ಜಿ.ಎಂ.ಸಿದ್ದೇಶ್ವರ ಅವರಿಗೆ ಕರ್ನಾಟಕ ರಾಜ್ಯ ಅಸಂಘಟಿತ ಮುದ್ರಣ ಕಾರ್ಮಿಕರ ಸಂಘ ಬೆಂಬಲ ಸೂಚಿಸಿದೆ.
ಈ ಕುರಿತು ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ರಾಜ್ಯಾಧ್ಯಕ್ಷ ಎನ್.ರಾಜೇಂದ್ರ ಬಂಗೇರ, ಸಿದ್ದೇಶ್ವರ ಅವರ ಕಳೆದ ಮೂರು ಬಾರಿ ಆಯ್ಕೆಯಾಗಿ ಜಿಲ್ಲೆಯ ಅಭಿವೃದ್ಧಿಗೆ ಸಾಕಷ್ಟು ಶ್ರಮಿಸಿದ್ದಾರೆ. ಅಲ್ಲದೆ ಅಸಂಘಟಿತ ಮುದ್ರಣ ಕಾರ್ಮಿಕರ ಸಮಸ್ಯೆಗಳಿಗೆ ಸ್ಪಂದಿಸುವ ಭರವಸೆ ನೀಡಿದ್ದಾರೆ ಎಂದರು.
ಜಿಲ್ಲೆಯಲ್ಲಿ ಸುಮಾರು 1000ಕ್ಕೂ ಹೆಚ್ಚು ಅಸಂಘಟಿತ ಮುದ್ರಣ ಕಾರ್ಮಿಕರು ಇದ್ದಾರೆ. ಎಲ್ಲಾ ಮುದ್ರಣ ಕಾರ್ಮಿಕರು ಬಿಜೆಪಿ ಅಭ್ಯರ್ಥಿ ಸಿದ್ದೇಶ್ವರ ಅವರನ್ನು ಬೆಂಬಲಿಸಬೇಕೆಂದು ಮನವಿ ಮಾಡಿದರು.ಸುದ್ದಿಗೋಷ್ಠಿಯಲ್ಲಿ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಜು.ಎಂ.ಹೆಚ್., ಕಾರ್ಯದರ್ಶಿ ಲಕ್ಷ್ಮೀಕಾಂತ್, ಬಸವರಾಜ್ ಕೆ.ಎಂ, ಜಿಲ್ಲಾ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಪಿ.ಸಿ.ಶ್ರೀನಿವಾಸ್, ಪ್ರವೀಣ್, ಮಣಿಕಂಠ, ರವಿಕುಮಾರ್ ಮತ್ತಿತರರು ಹಾಜರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
