ಬಳ್ಳಾರಿ
ಜಿಲ್ಲಾಡಳಿತದ ವತಿಯಿಂದ ಕರ್ನಾಟಕ ರತ್ನ, ಪದ್ಮಭೂಷಣ ನಟ ಡಾ.ರಾಜ್ಕುಮಾರ ಅವರ ಜಯಂತಿಯನ್ನು ಇದೇ ಏ.24 ರಂದು ಬೆಳಗ್ಗೆ 9:30ಕ್ಕೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸರಳವಾಗಿ ಆಚರಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಡಾ.ವಿ.ರಾಮ್ ಪ್ರಸಾತ್ ಮನೋಹರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಡಾ.ರಾಜಕುಮಾರ ಅವರ ಭಾವಚಿತ್ರಕ್ಕೆ ಜಿಲ್ಲಾಧಿಕಾರಿಗಳು ಪುಷ್ಪಾರ್ಚನೆ ಮಾಡುವುದರ ಮೂಲಕ ಚಾಲನೆ ನೀಡಲಿದ್ದಾರೆ. ಜಿಲ್ಲಾಮಟ್ಟದ ಎಲ್ಲಾ ಅಧಿಕಾರಿಗಳು ಕಡ್ಡಾಯವಾಗಿ ಹಾಜರಾಗಬೇಕು ಎಂದು ತಿಳಿಸಿರುವ ಅವರು ಕನ್ನಡ ಪರ ಸಂಘಟನೆಗಳ ಮುಖಂಡರು ಭಾಗವಹಿಸಲು ಕೋರಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
