ಹಿರಿಯೂರು :
ತಾಲ್ಲೂಕಿನ ವದ್ದೀಗೆರೆಯ ಸುಕ್ಷೇತ್ರ ಸಿದ್ದೇಶ್ವರಸ್ವಾಮಿ ಬ್ರಹ್ಮರಥೋತ್ಸವ ಸಾವಿರಾರು ಭಕ್ತರ ಮಧ್ಯೆ ವಿಜೃಂಭಣೆಯಿಂದ ನೆರವೇರಿತು. ಮಧ್ಯಾಹ್ನ ಹೂವಿನ ಪಲ್ಲಕ್ಕಿ ಉತ್ಸವ, ಜನಪದ ಕಲಾವಿದರಿಂದ ವೈವಿಧ್ಯಮಯ ಮೆರವಣಿಗೆ ನಂತರ ಸಂಜೆ 5.30ಕ್ಕೆ ಬ್ರಹ್ಮರಥೋತ್ಸವ ನಡೆಯಿತು.
ಸಿದ್ದಪ್ಪನ ದೇವಾಲಯ ಚೋಳರ ಕಾಲದಲ್ಲಿ ನಿರ್ಮಾಣವಾಗಿರಬಹುದು ಎಂಬುದು ಇತಿಹಾಸಕಾರರ ಅನಿಸಿಕೆ. ಹಿಂದೆ ಈ ಪ್ರದೇಶದಲ್ಲಿ ವದ್ದಿಮೆಳೆ ಯಥೇಚ್ಛವಾಗಿ ಬೆಳೆಯುತ್ತಿದ್ದ ಕಾರಣ ವದ್ದೀಗೆರೆ ಎಂಬ ಹೆಸರು ಬಂದಿರಬಹುದು ಸಿದ್ದಪ್ಪ ಈ ಮೆಳೆಗಳಲ್ಲೇ ವಾಸವಾಗಿದ್ದ ಎಂಬುದಾಗಿ ಹಿರಿಯರು ಹೇಳುತ್ತಾರೆ.
ಈ ಭಾಗದ ಗ್ರಾಮೀಣ ಪ್ರದೇಶದಲ್ಲಿ ರೈತರ ಹೊಲ-ಮನೆಗಳಲ್ಲಿ ಹಾವು-ಚೇಳು ಇತರೆ ಹುಳ-ಹುಪ್ಪಡೆಗಳು ಕಾಣಿಸಿಕೊಂಡವರು ಈ ಸಿದ್ದಪ್ಪ ದೇವರಿಗೆ ಹರಕೆ ಹೊತ್ತು ಬ್ರಹ್ಮರಥೋತ್ಸವದ ದಿನ ದೇವರಿಗೆ ಹರಕೆ ತೀರಿಸುವುದು ಇಲ್ಲಿಯ ವಾಡಿಕೆಯಾಗಿದೆ.ಈ ರಥೋತ್ಸವಕ್ಕೆ ಸುತ್ತಮುತ್ತಲಿನ ಗ್ರಾಮದ ಜನರಲ್ಲದೆ ತಾಲ್ಲೂಕಿನ ಜಿಲ್ಲೆಯ ಹಾಗೂ ರಾಜ್ಯದ ವಿವಿಧ ಭಾಗಗಳಿಂದ ಭಕ್ತರು ಆಗಮಿಸುವರು.