ಧಾರವಾಡ:

ಕುಂದಗೋಳ ವಿಧಾನಸಭೆ ಕ್ಷೇತ್ರದಿಂದ ದಿllಸಿ.ಎಸ್.ಶಿವಳ್ಳಿ ಪತ್ನಿ ಕುಸುಮಾ ಶಿವಳ್ಳಿ ಅವರು ಕಣಕ್ಕೆ ಇಳಿಯಲಿದ್ದಾರೆ ಎಂದು ಮಾಹಿತಿ ಸಿಕ್ಕಿದೆ.
ಪೌರಾಡಳಿತ ಸಚಿವ ಸಿ.ಎಸ್. ಶಿವಳ್ಳಿ ಅವರ ಅಕಾಲಿಕ ಸಾವಿನಿಂದ ತೆರವಾಗಿದ್ದ ಧಾರವಾಡ ಜಿಲ್ಲೆಯ ಕುಂದಗೋಳ ಕ್ಷೇತ್ರಕ್ಕೆ ಈಗಾಗಲೇ ಉಪ ಚುನಾವಣೆ ಘೋಷಣೆಯಾಗಿದ್ದು, ಮೇ 19ರಂದು ಮತದಾನ ನಡೆಯಲಿದೆ.
ಇನ್ನು ಕುಂದಗೋಳ ವಿಧಾನಸಭೆ ಉಪಚುನಾವಣೆ ಕಾಂಗ್ರೆಸ್ ಟಿಕೆಟ್‌ಗಾಗಿ 14 ಜನರಿಂದ ಅರ್ಜಿ ಸಲ್ಲಿಸಿದ್ದರು ಎನ್ನಲಾಗಿದೆ. ಆದರೆ ಹೈಕಮಾಂಡ್ ಅನುಕಂಪದ ಮೇಲೆ ಕುಸುಮಾ ಶಿವಳ್ಳಿ ಅಖಾಡಕ್ಕೆ ಇಳಿಸಲು ಮುಂದಾಗಿದೆ. ಏಪ್ರಿಲ್ 26 ರಂದು ಕುಸುಮಾ ಶಿವಳ್ಳಿ ಅವರು ನಾಮಪತ್ರ ಸಲ್ಲಿಸಲಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








