ಚಿತ್ರದುರ್ಗ:
ಕಳೆದ ಹದಿನೆಂಟರಂದು ನಡೆದ ಚಿತ್ರದುರ್ಗ ಲೋಕಸಭಾ ಚುನಾವಣೆಯಲ್ಲಿ ಚಳ್ಳಕೆರೆ ತಾಲೂಕು ಹೊನ್ನೂರಿನಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ.ಕಾರ್ಯಕರ್ತರ ನಡುವೆ ನಡೆದ ಗಲಾಟೆಯಲ್ಲಿ ತಲೆಗೆ ಪೆಟ್ಟು ತಿಂದು ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಗೆ ದಾಖಲಾಗಿರುವ ಬಿಜೆಪಿ.ಕಾರ್ಯಕರ್ತ ಜಯಣ್ಣನಿಗೆ ಬಿಜೆಪಿ.ಅಭ್ಯರ್ಥಿ ಎ.ನಾರಾಯಣಸ್ವಾಮಿ ಸಮಾಧಾನ ಪಡಿಸಿದರು.
ಜಿಲ್ಲಾಸ್ಪತ್ರೆ ತುರ್ತು ಚಿಕಿತ್ಸಾ ಘಟಕಕ್ಕೆ ಬುಧವಾರ ಭೇಟಿ ನೀಡಿದ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ.ಅಭ್ಯರ್ಥಿ ಎ.ನಾರಾಯಣಸ್ವಾಮಿ ಗಾಯಾಳು ಜಯಣ್ಣನ ಆರೋಗ್ಯ ವಿಚಾರಿಸಿ ಧೈರ್ಯ ಹೇಳಿದರು.
ಆಸ್ಪತ್ರೆಯಲ್ಲಿನ ಅವ್ಯವಸ್ಥೆ ಬಗ್ಗೆ ಪತ್ರಿಕೆ ಪ್ರಶ್ನಿಸಿದಾಗ ಮೇ.23 ರ ಫಲಿತಾಂಶದ ನಂತರ ಜಿಲ್ಲಾಸ್ಪತ್ರೆಗೆ ಮತ್ತೊಮ್ಮೆ ಭೇಟಿ ಇಲ್ಲಿನ ಅನಾನುಕೂಲಗಳ ಬಗ್ಗೆ ಅಧಿಕಾರಿಗಳ ಜೊತೆ ಚರ್ಚಿಸಿ ಸರ್ಕಾರಿ ಆಸ್ಪತ್ರೆಗೆ ಬರುವ ಬಡವರಿಗೆ ಸರಿಯಾದ ಚಿಕಿತ್ಸೆ ದೊರಕಿಸುವಲ್ಲಿ ಪ್ರಾಮಾಣಿಕವಾಗಿ ಪ್ರಯತ್ನಿಸುವುದಾಗಿ ಭರವಸೆ ನೀಡಿದರು.
ಬಿಜೆಪಿ.ಜಿಲ್ಲಾ ಮಾಜಿ ಅಧ್ಯಕ್ಷ ಸಿದ್ದೇಶ್ಯಾದವ್, ವಕ್ತಾರ ನಾಗರಾಜ್ಬೇದ್ರೆ, ಮೋಹನ್ ಇನ್ನು ಮುಂತಾದವರು ಈ ಸಂದರ್ಭದಲ್ಲಿ ಹಾಜರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








