ಬೆಂಗಳೂರು:
ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಹೆದರಿಸಲು ಹೋಗಿ ಯುವಕನೊಬ್ಬ ರೈಲು ಎಂಜಿನ್ ಮೇಲೆ ಹತ್ತಿ ವಿದ್ಯುತ್ ಶಾಕ್ ನಿಂದ ಸುಟ್ಟು ಭಸ್ಮವಾದ ಘಟನೆ ಬೆಂಗಳೂರಿನ ಮೆಜೆಸ್ಟಿಕ್ ರೈಲ್ವೆ ಸ್ಟೇಷನ್ ನಲ್ಲಿ ನಡೆದಿದೆ.
ಮಾನಸಿಕ ಅಸ್ವಸ್ಥನೊಬ್ಬ ರೈಲ್ವೆ ನಿಲ್ದಾಣಕ್ಕೆ ಆಗಮಿಸಿ, ರೈಲನ್ನು ಹತ್ತಿ ಅಲ್ಲಿಂದ ಹಾರಿ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಬೆದರಿಕೆ ಹಾಕುತ್ತಿದ್ದ, ಆದರೆ ಕೆಲವೇ ಕ್ಷಣಗಳಲ್ಲಿ ನೋಡನೋಡುತ್ತಿದ್ದಂತೆ ರೈಲಿನ ಮೇಲಿದ್ದ ಹೈಟೆನ್ಷನ್ ವಿದ್ಯುತ್ ತಂತಿ ಮುಟ್ಟಿ ಸ್ಥಳದಲ್ಲೇ ಸುಟ್ಟು ಭಸ್ಮವಾಗಿದ್ದಾನೆ. ಆತ ಮಾನಸಿಕ ಅಸ್ವಸ್ಥನಾಗಿದ್ದ ಕಾರಣ ಘಟನೆಗೆ ಕಾರಣವನ್ನೂ ಹೇಳಲು ಸಾಧ್ಯವಾಗುತ್ತಿಲ್ಲ. ಈ ದೃಶ್ಯ ಸಿಸಿಕ್ಯಾಮರಾದಲ್ಲಿ ಸೆರೆಯಾಗಿದೆ.
25 ಸಾವಿರ ಮೆಗಾ ವ್ಯಾಟ್ ವಿದ್ಯುತ್ ಇದ್ದ ತಂತಿಯನ್ನು ಮುಟ್ಟಿದ್ದಾನೆ, ಮೆಜೆಸ್ಟಿಕ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಶವವನ್ನು ಕುಟುಂಬಸ್ಥರಿಗೆ ರವಾನಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
