ಎನ್ಕೌಂಟರ್: ಇಬ್ಬರು ಭಯೋತ್ಪಾದರು ಖತಂ!!

ಶ್ರೀನಗರ: 

      ಜಮ್ಮು-ಕಾಶ್ಮೀರದ ಅನಂತ್‌ನಾಗ್ ಜಿಲ್ಲೆಯಲ್ಲಿ ಭಾರತೀಯ ಭದ್ರತಾ ಪಡೆಗಳು ನಡೆಸಿದ ಎನ್ಕೌಂಟರ್‌ನಲ್ಲಿ ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ ಎಂದು ಸೇನಾ ಮೂಲಗಳು ತಿಳಿಸಿವೆ.

      ಗುರುವಾರ ಬೆಳಗಿನ ಜಾವ ಉಗ್ರರು ಅಡಗಿಕೊಂಡಿರುವ ಖಚಿತ ಮಾಹಿತಿ ಆಧರಿಸಿ ಈ ಪ್ರದೇಶದಲ್ಲಿ ಪೊಲೀಸರು ಹಾಗೂ ರಕ್ಷಣಾ ಪಡೆಗಳು ಜಂಟಿಯಾಗಿ ಹುಡುಕು ಕಾರ್ಯಾಚರಣೆ ನಡೆಸಿದ್ದವು. ತಪ್ಪಿಸಿಕೊಳ್ಳುವ ಯತ್ನದಲ್ಲಿ ಉಗ್ರರು ಗುಂಡಿನ ದಾಳಿ ಆರಂಭಿಸಿದ್ದರಿಂದ, ಭದ್ರತಾಪಡೆ ಸಿಬ್ಬಂದಿ ಕೂಡ ಪ್ರತಿದಾಳಿ ಆರಂಭಿಸಿದರು.

      ಈ ವೇಳೆ ಇಬ್ಬರು ಉಗ್ರರು ಬಲಿಯಾಗಿದ್ದು, ಶವಗಳನ್ನು ವಶಕ್ಕೆ ಪಡೆಯಲಾಗಿದೆ. ಘಟನಾ ಸ್ಥಳದಲ್ಲಿ ಶಸ್ತ್ರಾಸ್ತ್ರಗಳನ್ನೂ ವಶಕ್ಕೆ ಪಡೆಯಲಾಗಿದ್ದು, ಹುಡುಕು ಕಾರ್ಯಾಚರಣೆ ಮುಂದುವರಿಸಲಾಗಿದೆ. ಪೊಲೀಸರು ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ  

Recent Articles

spot_img

Related Stories

Share via
Copy link