ಸಂಡೂರು:
ಬೈಕ್ ಗೆ ಬಸ್ ಡಿಕ್ಕಿ ಹೊಡೆದು ನಂತರ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರೂ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಡೆದಿದೆ.
ಕೂಡ್ಲಿಗಿಯಿಂದ ಸಂಡೂರು ಕಡೆ ಬರುತ್ತಿದ್ದ ಈಶಾನ್ಯ ಸಾರಿಗೆ ಸಂಸ್ಥೆಯ(ಕೆ.ಎ.35 ಎಫ್.285) ಬಸ್ ಗಂಡಿ ನರಸಿಂಹ ದೇವಸ್ಥಾನ ಬಳಿ ಬರುವಾಗ ಇಳಿಜಾರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಎದುರಿಗೆ ಬರುತ್ತಿದ್ದ ಬೈಕ್ ಗೆ (ಕೆಎ-35 ವಿ.1632)ಡಿಕ್ಕಿ ಹೊಡೆದು ನಂತರ ಮರ ಹಾಗೂ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಎಸ್.ಕೆ.ಎಂ.ಇ ಗಣಿ ಅದಿರು ಸ್ಟಾಕನ್ ಪ್ಲಾಟ್ ಗೆ ಬಂದು ನಿಂತಿದೆ.
ಅಪಘಾತದಲ್ಲಿ ಬೈಕ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತಪಟ್ಟವರು ಹಗರಿಬೊಮ್ಮನಹಳ್ಳಿತಾಲೂಕಿನ ನ್ಯಾಣಾಪುರ ಗ್ರಾಮದ ನಾಗರಾಜ (25), ಪಾಂಡುರಂಗ (26) ಎಂದು ತಿಳಿದು ಬಂದಿದೆ. ಅಲ್ಲದೇ ಬಸ್ ನಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಚಾಲಕನ ಅತೀ ವೇಗವೇ ಅಪಘಾತಕ್ಕೆ ಕಾರಣ ಎನ್ನಲಾಗಿದ್ದು, ಅಪಘಾತದ ಬಳಿಕ ಬಸ್ ಚಾಲಕ ಬಸ್ಸು ಬಿಟ್ಟು ಪರಾರಿಯಾಗಿದ್ದಾನೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಸಂಡೂರು ಪೊಲೀಸ್ ಠಾಣೆ ಪೊಲೀಸರು, ಮುಂದಿನ ಕ್ರಮ ಕೈಗೊಂಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ