ಪರೀಕ್ಷಾ ಕೇಂದ್ರ ಸುತ್ತ ನಿರ್ಬಂಧಿತ ಪ್ರದೇಶ ಘೋಷಣೆ

ಹಾವೇರಿ

    ಪ್ರಸಕ್ತ 2019-20ನೇ ಸಾಲಿನ ವೃತ್ತಿ ಶಿಕ್ಷಣ ಕೋರ್ಸುಗಳ ಸಾಮಾನ್ಯ ಪ್ರವೇಶ ಪರೀಕ್ಷೆಗಳು ಎಪ್ರಿಲ್ 29 ಹಾಗೂ 30 ನಗರದ ಆರು ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿವೆ. ಶಾಂತಿ ಪಾಲನೆ ಹಾಗೂ ಕಾನೂನು ಸುವ್ಯವಸ್ಥೆ ಹಿತದೃಷ್ಟಿಯಿಂದ ಪರೀಕ್ಷಾ ಕೇಂದ್ರಗಳ 200 ಮೀಟರ್ ವ್ಯಾಪ್ತಿಯನ್ನು ನಿರ್ಬಂಧಿತ ಪ್ರದೇಶವೆಂದು ಘೋಷಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳಾದ ಕೃಷ್ಣ ಬಾಜಪೇಯಿ ಅವರು ಆದೇಶ ಹೊರಡಿಸಿದ್ದಾರೆ.

    ಪರೀಕ್ಷಾ ಕೇಂದ್ರದ ನಿಷೇಧಿತ ಪ್ರದೇಶದಲ್ಲಿ ಅನಧಿಕೃತ ವ್ಯಕ್ತಿ ಹಾಗೂ ವ್ಯಕ್ತಿಗಳ ಗುಂಪುಗಳ ಪ್ರವೇಶ ನಿಷೇಧಸಲಾಗಿದೆ. ಈ ಪ್ರದೇಶದಲ್ಲಿನ ಝರಾಕ್ಸ್ ಮತ್ತು ಟೈಪಿಂಗ್ ಸೆಂಟರ್‍ಗಳನ್ನು ಪರೀಕ್ಷಾ ಸಮಯದಲ್ಲಿ ಮುಚ್ಚಲು ಆದೇಶಿಸಲಾಗಿದೆ ಹಾಗೂ ಮೊಬೈಲ್ ಬಳಕೆಯನ್ನು ನಿಷೇಧಿಸಲಾಗಿದೆ. ಸದರಿ ಆದೇಶವನ್ನು ಉಲ್ಲಂಘನೆ ಮಾಡಿದವರ ವಿರುದ್ಧ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದ್ದಾರೆ.

    ಪರೀಕ್ಷಾ ಕೇಂದ್ರಗಳ ವಿವರ: ಹಾವೇರಿ ನಗರದ ಎಸ್.ಎಂ.ಎಸ್. ಪದವಿ ಪೂರ್ವ ಕಾಲೇಜು, ಗುದ್ಲೇಪ್ಪ ಹಳ್ಳಿಕೇರಿ ಕಾಲೇಜು, ಎಸ್.ಜೆ.ಎಂ.ಪದವಿ ಪೂರ್ವ ಕಾಲೇಜು, ಶ್ರೀ ಶಿವಲಿಂಗೇಶ್ವರ ಪದವಿ ಪೂರ್ವ ಕಾಲೇಜು , ಲಯನ್ಸ್ ಇಂಗ್ಲೀಷ್ ಮಿಡಿಯಂ ಪ್ರೌಢಶಾಲೆ ಹಾಗೂ ಜ್ಞಾನಗಂಗಾ ಶಿಕ್ಷಣ ಸಮಿತಿ ಚನ್ನಬಸಪ್ಪ ಮಾಗಾವಿ ಪ್ರೌಢಶಾಲೆ.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link