ದಾವಣಗೆರೆ
ದಿಶಾ ಉದ್ಯಮಶೀಲತಾಭಿವೃದ್ಧಿ ಕೇಂದ್ರ ಹಾಗೂ ದಾವಣಗೆರೆ ವಿಶ್ವವಿದ್ಯಾನಿಲಯದ ಸಂಯುಕ್ತ ಆಶ್ರಯದಲ್ಲಿ ಏ.29 ರಂದು ದಾವಣಗೆರೆ ವಿವಿ ಯ ಎಸ್ಎಸ್ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ “ದಿಶಾ ರೆಡಿ ಮತ್ತು ಸ್ಟೆಡಿ ಕಾರ್ಯಕ್ರಮ”ವನ್ನು ದಾವಣಗೆರೆ ವಿಶ್ವವಿದ್ಯಾನಿಲಯದ ಕುಲಸಚಿವ ಪ್ರೊ.ಪಿ.ಕಣ್ಣನ್ ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಪರೀಕ್ಷಾಂಗ ಕುಲಸಚಿವ ಪ್ರೊ. ಬಸವರಾಜ ಬಣಕಾರ, ಹಣಕಾಸು ಅಧಿಕಾರಿ ಪ್ರೊ. ಜೆ.ಕೆ.ರಾಜು, ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರದ ಜಂಟಿ ನಿರ್ದೇಶಕ ಆರ್. ಪಿ. ಪಾಟೀಲ್, ಸೂಕ್ಷ್ಮ ಜೀವಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕ ಮತ್ತು ದಾವಣಗೆರೆ ವಿಶ್ವವಿದ್ಯಾನಿಲಯ ಉದ್ಯೋಗ ಮಾಹಿತಿ ಘಟಕದ ಸಂಚಾಲಕ ಡಾ. ವಿರುಪಾಕ್ಷಯ್ಯ ಪಾಲ್ಗೊಂಡಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
