ಚಿತ್ರದುರ್ಗ
ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವತಿಯಿಂದ ಏ. 29 ರಂದು ಜಿಲ್ಲೆಯ 8 ಪರೀಕ್ಷಾ ಕೇಮದ್ರಗಳಲ್ಲಿ ಏರ್ಪಡಿಸಿದ ಸಿಇಟಿ ಪರೀಕ್ಷೆ ಸುಗಮವಾಗಿ ನಡೆಯಿತು.ಪರೀಕ್ಷೆಯಲ್ಲಿ ಯಾವುದೇ ಗೊಂದಲವಿಲ್ಲದಂತೆ ಜಿಲ್ಲಾಡಳಿತ ಅಗತ್ಯ ಕ್ರಮ ಕೈಗೊಂಡಿತ್ತು. ಪರೀಕ್ಷಾ ಕೇಂದ್ರಗಳ ಬಳಿ ನಿಷೇದಾಜ್ಞೆ ಜಾರಿಗೊಳಿಸಿ ಸೂಕ್ತ ಬಂದೋಬಸ್ತ್ ಮಾಡಲಾಗಿತ್ತು. ಸೋಮವಾರ ಜೀವಶಾಸ್ತ್ರ ವಿಷಯಕ್ಕೆ ನಡೆದ ಪರೀಕ್ಷೆಗೆ 3849 ವಿದ್ಯಾರ್ಥಿಗಳು ನೊಂದಣಿಯಾಗಿದ್ದು, ಈ ಪೈಕಿ 623 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದರು
ಗಣಿತ ಪರೀಕ್ಷೆಗೆ 3849 ವಿದ್ಯಾರ್ಥಿಗಳು ನೊಂದಣಿಯಾಗಿದ್ದು, ಈ ಪೈಕಿ 451 ವಿದ್ಯಾರ್ಥಿಗಳು ಗೈರಾಗಿದ್ದಾರೆ. ಏ. 30 ರಂದು ಭೌತಶಾಸ್ತ್ರ ಮತ್ತು ರಸಾಯನಶಾಸ್ತ್ರ ವಿಷಯದ ಪರೀಕ್ಷೆ ನಡೆಯಲಿದೆ ಎಂದು ಪ.ಪೂ. ಶಿಕ್ಷಣ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
