ತುಮಕೂರು
ತುಮಕೂರು ನಗರದಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿ ಕೈಗೊಂಡಿರುವ ಕಾಮಗಾರಿಗಳ ನಿರ್ಮಾಣ ಕೆಲಸವನ್ನು ಚುರುಕುಗೊಳಿಸಿ ನಿಗಧಿತ ಕಾಲಾವಧಿಯೊಳಗೆ ಪೂರ್ಣಗೊಳಿಸುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಶಾಲಿನಿ ರಜನೀಶ್ ರವರು ಅಧಿಕಾರಿಗಳಿಗೆ ಹಾಗೂ ಗುತ್ತಿಗೆದಾರರಿಗೆ ಸೂಚಿಸಿದರು.
ಇಂದು ಸ್ಮಾರ್ಟ್ಸಿಟಿ ಯೋಜನೆಯಡಿ ಕೈಗೊಂಡಿರುವ ತುಮಕೂರು ನಗರದ ಚಿಕ್ಕಪೇಟೆ, ರಿಂಗ್ರಸ್ತೆ ನಿರ್ಮಾಣ ಕಾಮಗಾರಿಗಳ ಸ್ಥಳ ಪರಿಶೀಲನೆ ನಡೆಸಿ ಅವರು ಮಾತನಾಡಿದರು. ಮಳೆಗಾಲ ಚುರುಕುಗೊಳ್ಳುವ ಮುನ್ನ ಮೂಲಭೂತ ಸೌಕರ್ಯಗಳ ಕಾಮಗಾರಿಗಳನ್ನು ಪೂರ್ಣಗೊಳಿಸಿ ಇದಕ್ಕಾಗಿ ಹೆಚ್ಚಿನ ಕಾರ್ಮಿಕರನ್ನು ನಿಯೋಜಿಸಿ ಕಾಮಗಾರಿಯನ್ನು ಚುರುಕುಗೊಳಿಸುವಂತೆ ಸೂಚಿಸಿದರು. ಈ ಸಂದರ್ಭದಲ್ಲಿ ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕ ರಂಗಸ್ವಾಮಿ ಪಾಲಿಕೆ ಆಯುಕ್ತ ಭೂಬಾಲನ್, ಜಿಲ್ಲಾ ಪಂಚಾಯತ್ ಸಿಇಓ ಶುಭಾ ಕಲ್ಯಾಣ್, ಮತ್ತಿತರರು ಹಾಜರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
![](https://prajapragathi.com/wp-content/uploads/2019/04/DSC_0862.gif)