ಮುಂಬೈ:

ಮಹಾರಾಷ್ಟ್ರದ ಗಡ್ಚಿರೋಲಿಯಲ್ಲಿ ನಕ್ಸಲರು ಐಇಡಿ ಬಾಂಬ್ ಸ್ಫೋಟಿಸಿದ ಪರಿಣಾಮ 16 ಮಂದಿ ಯೋಧರು ಹುತಾತ್ಮರಾಗಿದ್ದಾರೆ.
16 ಭದ್ರತಾ ಸಿಬ್ಬಂದಿಯನ್ನು ಕರೆದೊಯ್ಯುತ್ತಿದ್ದ ಪೊಲೀಸ್ ವಾಹನದ ಮೇಲೆ ನಕ್ಸಲರು ಐಇಡಿ ಸ್ಫೋಟಿಸಿದ್ದು, 15 ಕಮಾಂಡೋಗಳು ಹುತಾತ್ಮರಾಗಿದ್ದಾರೆ. ದಾಳಿ ಸ್ಥಳದಲ್ಲಿ ಪೊಲೀಸರು ಹಾಗೂ ನಕ್ಸಲರ ನಡುವೆ ಗುಂಡಿನ ಚಕಮಕಿ ನಡೆಯುತ್ತಿದೆ ಎಂದು ವರದಿಯಾಗಿದೆ.
16 security personnel killed as Naxals trigger IED blast in Maharashtra's Gadchiroli
Read @ANI Story | https://t.co/EqltbpqFE2 pic.twitter.com/0Q0rLE4wCd
— ANI Digital (@ani_digital) May 1, 2019
ಯೋಧರು ಬರುತ್ತಿದ್ದ ಮಾರ್ಗದ ಮಧ್ಯೆ ಉಗ್ರರು ದೊಡ್ಡ ಕಲ್ಲುಗಳನ್ನು ಇಟ್ಟು ಸಂಚಾರಕ್ಕೆ ಅಡ್ಡಿಪಡಿಸಿದ್ದರು. ಯೋಧರು ವಾಹನದಿಂದ ಕೆಳಗಿಳಿದು ಪರಿಶೀಲಿಸುತ್ತಿದ್ದ ಸಂದರ್ಭದಲ್ಲಿ ಮರೆಯಲ್ಲಿ ಅವಿತಿಟ್ಟುಕೊಂಡಿದ್ದ ನಕ್ಸಲರು ಸುಧಾರಿತ ಸ್ಫೋಟಕ ಸಾಧನ (ಐಇಡಿ) ಸ್ಫೋಟಿಸಿದರು. ಪರಿಣಾಮ ಪೊಲೀಸ್ ವಾಹನ ಛಿದ್ರಗೊಂಡಿದೆ.
ಇದೇ ಸಂದರ್ಭದಲ್ಲಿ ಯೋಧರು ಮತ್ತು ಮಾವೋವಾದಿಗಳ ನಡುವೆ ಭಾರೀ ಗುಂಡಿನ ಚಕಮಕಿ ನಡೆಯಿತು. ಈ ಘಟನೆಯಲ್ಲಿ 16 ಯೋಧರು ಹುತಾತ್ಮರಾಗಿ ತೀವ್ರತೆಗೆ ವಾಹನ ನಜ್ಜುಗುಜ್ಜಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








