ಬಳ್ಳಾರಿ
ಇಲ್ಲಿನ ಗಾಂಧಿನಗರದಲ್ಲಿರುವ ಸ್ಟಿಚ್ ಎಂಟರ್ ಪ್ರೈಸಸ್ ನಲ್ಲಿ ಜೀನ್ಸ್ ಉದ್ಯಮ ತಯಾರಿಕೆಯಲ್ಲಿ ತೊಡಗಿಸಿಕೊಂಡ ಮಹಿಳೆಯರಿಗೆ ಸಿಹಿ ವಿತರಿಸುವ ಮೂಲಕ ಕಾರ್ಮಿಕ ದಿನಾಚರಣೆ ಆಚರಿಸಲಾಯಿತು.
ಶ್ರೀ ಸೋಮೇಶ್ವರ ರೂರಲ್ ಅಂಡ್ ಅರ್ಬನ್ ಡೆವಲಪ್‍ಮೆಂಟ್ ಟ್ರಸ್ಟ್ ಅಧ್ಯಕ್ಷೆ ಸುಮಾರೆಡ್ಡಿ ನೇತೃತ್ವದಲ್ಲಿ 50ಕ್ಕೂ ಹೆಚ್ಚು ಮಹಿಳೆಯರಿಗೆ ಸಿಹಿ ವಿತರಿಸಿ ಕಾರ್ಮಿಕ ದಿನಾಚರಣೆಯ ಶುಭಾಶಯ ಸಲ್ಲಿಸಲಾಯಿತು. ಮಹಿಳೆಯರೂ ಸಹ ದೇಶದ ಅಭಿವೃದ್ಧಿಯಲ್ಲಿ ಶ್ರಮಿಕರಾಗಿ ದುಡಿಯುತ್ತಿದ್ದಾರೆ. ಈ ಸಂದರ್ಭದಲ್ಲಿ ಅವರನ್ನು ಗೌರವಿಸಿದರೆ ಇಡೀ ಕಾರ್ಮಿಕ ಸಮುದಾಯವನ್ನೇ ಗೌರವಿಸಿದಂತಾಗುತ್ತದೆ ಎಂದು ಸುಮಾ ರೆಡ್ಡಿ ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಸ್ವಿಚ್ ಎಂಟರ್ ಪ್ರೈಸಸ್ ನ ಮಾಲೀಕರಾದ ಸಹನಾ ಇದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
