ಅಂಡುಲ್
ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಯಾವುದೇ ಹೋಂವರ್ಕ್ ಇಲ್ಲದೆ ಸುಳ್ಳು ಹಬ್ಬಿಸುತ್ತಿದ್ದಾರೆ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ
ಹೌರ ಜಿಲ್ಲೆಯಲ್ಲಿ ಇಂದು ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಟಿಎಂಸಿ ನಾಯಕಿ, ಸೈನ್‌ಬೋರ್ಡ್ ಬಾಬು ಬಂಗಾಲದಲ್ಲಿ ಎನ್‌ಆರ್‌ಸಿ ಅನುಷ್ಠಾನಗೊಳಿಸುವುದಾಗಿ ಹೇಳಿದ್ದಾರೆ. ಅದಕ್ಕೂ ಮೊದಲೇ ಅವರು ಅಧಿಕಾರದಿಂದ ದೂರ ಉಳಿಯುತ್ತಾರೆ. ಬಿಜೆಪಿ ಸೋಲುತ್ತದೆ ಎಂದರು. ಟಿಎಂಸಿಯ ಬ್ಲಾಕ್ ಅಧ್ಯಕ್ಷರು ಮತ್ತು ಜಿಲ್ಲಾಧ್ಯಕ್ಷರು ಅಮಿತ್ ಶಾ ಮತ್ತು ನರೇಂದ್ರ ಮೋದಿಗಿಂತ ಹೆಚ್ಚು ಕೌಶಲ್ಯ ಹೊಂದಿದ್ದಾರೆ ಎಂದು ಅವರು ಟೀಕಿಸಿದರು.
ಬಿಜೆಪಿ ಉತ್ತರ ಪ್ರದೇಶದಲ್ಲಿ ಜನರನ್ನು ಸಾಯಿಸುತ್ತಿದೆ. ಗುಜರಾತ್‌ನಲ್ಲಿ ಕೂಡ ಜನರನ್ನು ಹಿಂಸಿಸಲಾಗುತ್ತಿದೆ. ಸಮಾಜದಲ್ಲಿ ಗಲಭೆ ಸೃಷ್ಟಿಸಲು ಬಿಜೆಪಿ ಬಯಸುತ್ತದೆ ಎಂದು ಆರೋಪಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ







