ಗುಬ್ಬಿ
ಇತ್ತೀಚಗೆ ತಾಲ್ಲೂಕಿನಾಧ್ಯಂತ ಹಲವು ಕಡೆಗಳಲ್ಲಿ ಉತ್ತಮ ಮಳೆಯಾಗಿದ್ದು ರೈತರು ಪೂರ್ವ ಮುಂಗಾರು ಹಂಗಾಮಿನ ಬೆಳೆಗಳಾದ ಉದ್ದು, ಹೆಸರು ಕಾಳುಗಳನ್ನು ಬಿತ್ತನೆ ಮಾಡಲು ಭೂಮಿ ಸಿದ್ದ ಮಾಡಿಕೊಳ್ಳುತ್ತಿದ್ದಾರೆ. ಈಗಾಗಲೇ ಕೃಷಿ ಇಲಾಖೆ ಪೂರ್ವ ಮುಂಗಾರು ಹಂಗಾಮಿಗೆ ಅಗತ್ಯವಿರುವ ಉದ್ದು ಮತ್ತು ಹೆಸರು ಬಿತ್ತನೆ ಬೀಜಗಳನ್ನು ತಾಲ್ಲೂಕಿನ ಆರು ಹೋಬಳಿ ರೈತ ಸಂಪರ್ಕ ಕೇಂದ್ರಗಳಲ್ಲಿ ದಾಸ್ತಾನು ಮಾಡಿಕೊಂಡಿದ್ದು ಇದುವರೆಗೆ 4 ಕ್ವಿಂಟಾಲ್ ನಷ್ಟು ಬಿತ್ತನೆ ಬೀಜಗಳನ್ನು ರಿಯಾಯಿತಿ ದರದಲ್ಲಿ ವಿತರಣೆ ಮಾಡಲಾಗಿದೆ ಎಂದು ಕೃಷಿ ಇಲಾಖೆಯ ಮೂಲಗಳು ತಿಳಿಸಿವೆ.
ಕಳೆದ ಮೂರು ದಿನಗಳ ಹಿಂದೆ ತಾಲ್ಲೂಕಿನಾಧ್ಯಂತ 198 ಮಿಮೀ ನಷ್ಟು ಮಳೆ ಬಿದ್ದಿದೆ. ತಾಲ್ಲೂಕಿನ ಗುಬ್ಬಿ ಕಸಬ ಹೋಬಳಿ ವ್ಯಾಪ್ತಿಯಲ್ಲಿ 195 ಮಿಮಿ, ಚಿ.ಎಸ್.ಪುರ ಹೋಬಳಿ ವ್ಯಾಪ್ತಿಯಲ್ಲಿ 473 ಮಿಮಿ, ಚೇಳೂರು ಹೋಬಳಿ ವ್ಯಾಪ್ತಿಯಲ್ಲಿ 320 ಮಿಮಿ, ಹಾಗಲವಾಡಿ ಹೋಬಳಿ ವ್ಯಾಪ್ತಿಯಲ್ಲಿ 89 ಮಿಮಿ. ನಿಟ್ಟೂರು ಹೋಬಳಿ ವ್ಯಾಪ್ತಿಯಲ್ಲಿ 75 ಮಿಮಿ, ಕಡಬ ಹೋಬಳಿ ವ್ಯಾಪ್ತಿಯಲ್ಲಿ 97 ಮಿಮಿ ಮಳೆಯಾಗಿದ್ದು ರೈತರು ಪೂರ್ವ ಮುಂಗಾರು ಹಂಗಾಮಿನ ಕೃಷಿ ಬೆಳೆಗಳನ್ನು ಬೆಳೆಯಲು ಭೂಮಿಯನ್ನು ಉಳುಮೆ ಮಾಡಿಕೊಂಡು ಬಿತ್ತನೆಗೆ ಸಿದ್ದತೆ ಮಾಡಿಕೊಳ್ಳುತ್ತಿದ್ದಾರೆ.
ಪೂರ್ವ ಮುಂಗಾರು ಹಂಗಾಮಿಗೆ ಅಗತ್ಯವಿರುವ ಬಿತ್ತನೆ ಬೀಜಗಳನ್ನು ತಾಲ್ಲೂಕಿನ ಆರು ಹೋಬಳಿಗಳ ರೈತ ಸಂಪರ್ಕ ಕೇಂದ್ರಗಳಲ್ಲಿ 36.60 ಕ್ವಿಂಟಾಲ್ ಉದ್ದು ಮತ್ತು ಹೆಸರು ಬಿತ್ತನೆ ಬೀಜಗಳನ್ನು ದಾಸ್ತಾನು ಮಾಡಿಕೊಂಡಿದ್ದು ರೈತರಿಗೆ ರಿಯಾಯಿತಿ ದರದಲ್ಲಿ ವಿತರಣೆ ಮಾಡಲಾಗುತ್ತಿದೆ ರೈತರು ತಮ್ಮ ಸಮೀಪದ ರೈತ ಸಂಪರ್ಕ ಕೇಂದ್ರಗಳನ್ನು ಸಂಪರ್ಕಿಸಿ ಅಗತ್ಯವಿರುವ ಬಿತ್ತನೆ ಬೀಜಗಳನ್ನು ಪಡೆದುಕೊಳ್ಳುವಂತೆ ಕೃಷಿ ಇಲಾಖೆ ತಿಳಿಸಿದೆ. ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆಗೆ ಅಗತ್ಯವಿರುವ ಬಿತ್ತನೆ ಬೀಜಗಳು ಸದಸ್ಯದಲ್ಲಿಯೆ ಬರಲಿದ್ದು ರೈತರಿಗೆ ಬಿತ್ತನೆ ಬೀಜದ ಸಮಸ್ಯೆಯಾಗದಂತೆ ಅಗತ್ಯ ಕ್ರಮಗಳನ್ನು ಕೈಗೊಂಡಿರುವುದಾಗಿ ಕೃಷಿ ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
