ಹಾನಗಲ್ಲ :
ಜಾತ್ಯಾತೀತ ಸಮಾಜ ನಿರ್ಮಾಣದ ಕನಸು ಹೊತ್ತು ಸಮಾಜಮುಖಿಯಾಗಿ ತಮ್ಮನ್ನು ಅರ್ಪಿಸಿಕೊಂಡ ಜಗಜ್ಯೋತಿ ಬಸವಣ್ಣನವರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ತಾಲೂಕು ಆಡಳಿತ ಹಾಗೂ ಸಾರ್ವಜನಿಕರು ಸಭೆಯಲ್ಲಿ ಚರ್ಚಿಸಿ ತೀರ್ಮಾನಿಸಿದರು.
ಸೋಮವಾರ ಪಟ್ಟಣದ ಮಿನಿವಿಧಾನಸೌಧದ ಸಂಭಾಂಗಣದಲ್ಲಿ ತಾಲೂಕು ತಹಶೀಲ್ದಾರರು ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ಅಧ್ಯಕ್ಷ ಎಂ.ಗಂಗಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಬಸವ ಜಯಂತಿ ಅಚರಣೆ ಪೂರ್ವಭಾವಿ ಸಭೆಯಲ್ಲಿ ಚರ್ಚಿಸಲಾಯಿತು.
ಮಹಾಮಾನವತಾವಾದಿ ಶರಣ ತತ್ವದ ಮೂಲಕ ಸಾಮಾಜಿಕ ನ್ಯಾಯಕ್ಕಾಗಿ ಬದುಕಿ ಬರೆದ ಜಗಜ್ಯೋತಿ ಬಸವಣ್ಣನವರ ಜೀವನ ಮಾರ್ಗದರ್ಶಿಯಾಗಿದ್ದು, ಅವರ ಜಯಂತಿಯನ್ನು ಶ್ರದ್ಧಾ ಭಕ್ತಿಯಿಂದ ಆಚರರಿಸಲು ಎಲ್ಲರ ಸಹಕಾರ ಕೋರಿದ ತಹಶೀಲ್ದಾರ ಎಂ.ಗಂಗಪ್ಪ, ಬೆಳಿಗ್ಗೆ ತಹಶೀಲ್ದಾರ ಕಛೇರಿ ಸಭಾಂಗಣದಲ್ಲಿ ಜಗಜ್ಯೋತಿ ಬಸವೇಶ್ವರರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ನಂತರ ಶ್ರೀ ಕುಮಾರೇಶ್ವರ ವಿರಕ್ತಮಠದ ಆವರಣದಲ್ಲಿ ಆರೂಢವಾಗಿರುವ ಜಗಜ್ಯೋತಿ ಬಸವೇಶ್ವರರ ಕಂಚಿನ ಪುತ್ಥಳಿಗೆ ಹಾರ ಹಾಕಿ ಪೂಜೆ ಸಲ್ಲಿಸುವುದರೊಂದಿಗೆ, ಅಲ್ಲಿಯೇ ಸಭಾ ಕಾರ್ಯಕ್ರಮ ನಡೆಸಲು ಎಲ್ಲರ ಒಪ್ಪಿಗೆ ಪಡೆದು, ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಪ್ರೊ.ಮಾರುತಿ ಶಿಡ್ಲಾಪೂರ ಬಸವಣ್ಣನವರ ಜೀವನ ಕುರಿತು ಇದೇ ಸಂದರ್ಭದಲ್ಲಿ ಮಾತನಾಡುವರು ಎಂದರು.
ಹಾನಗಲ್ಲ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಎಸ್.ಎಂ.ಕೋತಂಬರಿ ಹಾಗೂ ಕನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷ ಮರಿಗೌಡ ಪಾಟೀಲ ಈ ಸಂದರ್ಭದಲ್ಲಿ ಮಾತನಾಡಿ, ಬಹುತೇಕ ಗ್ರಾಮಗಳಲ್ಲಿ ಇದೇ ದಿನ ಎಲ್ಲ ರೈತ ಸಮುದಾಯ ಬಸವಜಯಂತಿಯನ್ನು ತಮ್ಮ ಕೃಷಿ ಬದುಕಿನ ಸಂಗಾತಿಯಾದ ಹೋರಿಗಳ ಪೂಜೆ ಮೆರವಣೆಗೆಯೊಂದಿಗೆ ವಿಜೃಂಭಣೆಯಿಂದ ಆಚರಿಸುತ್ತಿದ್ದು ಗ್ರಾಮೀಣ ಪ್ರದೇಶದಿಂದ ಜನರು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವವರ ಸಂಖ್ಯೆ ಕಡಿಮೆಯಾಗುತ್ತದೆ. ಆದ್ದರಿಂದ ಮೆರವಣಿಗೆಯನ್ನು ಹೊರತುಪಡಿಸಿ ಸಭಾ ಕಾರ್ಯಕ್ರಮ ನೆರವೇರಿಸಲು ಸಲಹೆ ಮಾಡಿದರು.
ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಪ್ರೊ.ಮಾರುತಿ ಶಿಡ್ಲಾಪೂರ, ಸಮಾಜದ ಮುಖಂಡರಾದ ನಾಗಪ್ಪ ಸವದತ್ತಿ, ಬಸಣ್ಣ ಯಲಿ, ಅಡಿವೆಪ್ಪ ಆಲದಕಟ್ಟಿ, ಮಲ್ಲೇಶಪ್ಪ ಪರಪ್ಪನವರ, ರುದ್ರಪ್ಪ ಹಣ್ಣಿ, ರವಿ ಚಿಕ್ಕೇರಿ, ಮಹೇಶ ಕಬ್ಬೂರ, ರಾಜು ದಾನಪ್ಪನವರ, ಸೋಮಣ್ಣ ಜಡೆಗೊಂಡರ,
ಶ್ರೀಕಾಂತ ದುಂಡಣ್ಣನವರ, ರವಿ ನೆರಕಿಮನಿ, ಅಶೋಕ ಸಂಸಿ, ಚನ್ನಬಸನಗೌಡ ಪಾಟೀಲ, ಅಜ್ಜನಗೌಡ ಪಾಟೀಲ ಮೊದಲಾದವರು ಪಾಲ್ಗೊಂಡಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ