ತುಮಕೂರು
ಸ್ಥಳೀಯ ಸಂಸ್ಥೆ ಉಪ ಚುನಾವಣೆ ರಂಗೇರಿದ್ದು, ತುಮಕೂರು ಮಹಾನಗರ ಪಾಲಿಕೆ 22ನೇ ವಾರ್ಡ್‍ನಲ್ಲಿ ಸ್ಪರ್ಧಿಸಲು ಜೆಡಿಎಸ್ ಟಿಕೆಟ್ ಆಕಾಂಕ್ಷಿಗಳ ಪಟ್ಟಿ ಬೆಳೆಯುತ್ತಿದ್ದು, ಜೆಡಿಎಸ್ ಪಕ್ಷ ಕಾರ್ಯಕರ್ತನಾಗಿ, ಯುವ ಜನತಾದಳದ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿರುವ ಎಂ.ಎನ್.ರಾಘವೇಂದ್ರ (ರಘು) ಆಕಾಂಕ್ಷಿಯಾಗಿ ಬೆಂಬಲಿಗರ ಬಲ ಪ್ರದರ್ಶಿಸಿದ್ದಾರೆ.
ಜೆಡಿಎಸ್ ಸಚಿವ ಎಸ್.ಆರ್.ಶ್ರೀನಿವಾಸ್ ಹಾಗೂ ಮುಖಂಡರಾದ ಗೋವಿಂದರಾಜು ಅವರನ್ನು ಅಪಾರ ಬೆಂಬಲಿಗರೊಂದಿಗೆ ಭೇಟಿ ಮಾಡಿ, ಟಿಕೆಟ್ ನೀಡುವಂತೆ ಮನವಿ ಮಾಡಿದ್ದಾರೆ. ಜೆಡಿಎಸ್‍ನ ಭದ್ರನೆಲೆಯಾಗಿರುವ 22ನೇ ವಾರ್ಡ್‍ನಲ್ಲಿ ಸ್ಪರ್ಧಿಸಲು ಟಿಕೆಟ್ ನೀಡಿದರೆ, ಗೆಲುವು ಸಾಧಿಸುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ವಾರ್ಡ್ ವ್ಯಾಪ್ತಿಯಲ್ಲಿ ಸಾರ್ವಜನಿಕರೊಂದಿಗೆ ನಿರಂತರ ಸಂಪರ್ಕ ಹೊಂದಿರುವ ಎಂ.ಎನ್.ರಾಘವೇಂದ್ರ, ವಾರ್ಡ್‍ನಲ್ಲಿ ಸಾಂಸ್ಕತಿಕ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಗುರುತಿಸಿಕೊಂಡಿದ್ದು, ಬಡಮಕ್ಕಳ ವಿದ್ಯಾಭ್ಯಾಸಕ್ಕೆ ಸಹಾಯ ಮಾಡುವ ಮೂಲಕ ಭರವಸೆ ಯನ್ನು ಮೂಡಿಸಿದ್ದು, ರಾಘವೇಂದ್ರ ಅವರಿಗೆ ಟಿಕೆಟ್ ನೀಡುವಂತೆ ಬೆಂಬಲಿಗರು ಒತ್ತಾಯಿಸಿದ್ದಾರೆ.ಕಳೆದ ಲೋಕಸಭಾ ಚುನಾವಣೆ ಯಲ್ಲಿ ಪಕ್ಷಕ್ಕಾಗಿ ಹಗಲಿರುಳು ಶ್ರಮಿಸಿದ್ದಾರೆ, ಮಾಜಿ ಉಪ ಮೇಯರ್ ರವಿಕುಮಾರ್ ಅವರ ಹತ್ಯೆಯಿಂದ ತೆರವಾಗಿರುವ ಸ್ಥಾನಕ್ಕೆ ಪ್ರಬಲ ಆಕಾಂಕ್ಷಿಯಾಗಿದ್ದು ಟಿಕೆಟ್ ನೀಡುವಂತೆ ಮನವಿ ಮಾಡಿದ್ದಾರೆ
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ