ಪಾರ್ಕಿಂಗ್ ಅಭಿವೃದ್ಧಗೆ ಮುಂದಾದ ಬಿಎಂಆರ್‍ಸಿಎಲ್

ಬೆಂಗಳೂರು

     ನಗರದ ಮೆಟ್ರೋ ನಿಲ್ದಾಣಗಳ ಬಳಿ ವಾಹನ ನಿಲುಗಡೆ ಮಾಡಲು ಉಂಟಾಗುತ್ತಿರುವ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿರುವ ಬಿಎಂಆರ್‍ಸಿಎಲ್ ವಾಹನ ನಿಲುಗಡೆಗೆ ಸೂಕ್ತ ವ್ಯವಸ್ಥೆ ಕಲ್ಪಿಸಲು ಮುಂದಾಗಿದೆ.

     ಮೆಟ್ರೋ ನಿಲ್ದಾಣಗಳಲ್ಲಿ ಕಾರು, ಬಸ್, ದ್ವಿಚಕ್ರ ವಾಹನಗಳನ್ನು ನಿಲುಗಡೆ ಮಾಡಲು ಅನುಕೂಲವಾಗುವಂತೆ ವಾಹನ ನಿಲುಗಡೆ ಪ್ರದೇಶ ನಿರ್ಮಾಣ ಮಾಡಲಾಗುವುದು ಎಂದು ಬಿಎಂಆರ್‍ಸಿಎಲ್ ವ್ಯವಸ್ಥಾಪಕ ನಿರ್ದೇಶಕ ಅಜಯ್ ಸೇಠ್ ತಿಳಿಸಿದ್ದಾರೆ.

       ಇದುವರೆಗೂ ಹಲವು ಮೆಟ್ರೋ ನಿಲ್ದಾಣಗಳಲ್ಲಿ ಪಾರ್ಕಿಂಗ್ ವ್ಯವಸ್ಥೆ ಸಮಸ್ಯೆಯಾಗಿತ್ತು ಹಾಗೂ ವಾಣಿಜ್ಯ ಉದ್ದೇಶಗಳಿಗಾಗಿ ಬಳಸಿಕೊಳ್ಳಲಾಗಿತ್ತು. ಆದರೆ ಅವುಗಳನ್ನು ತೆರವುಗೊಳಿಸಿ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲು ಮುಂದಾಗಿರುವ ಬಿಎಂಆರ್‍ಸಿಎಲ್ ವಾಣಿಜ್ಯ ಕಟ್ಟಡಗಳಿಗೆ ಇನ್ನು ಮುಂದೆ ಅನುಮತಿ ನಿರಾಕರಿಸಲಿದೆ.

        ಮೆಟ್ರೋ ನಿಲ್ದಾಣಗಳಲ್ಲಿ ಪಾರ್ಕಿಂಗ್ ವ್ಯವಸ್ಥೆ ಇಲ್ಲದಿರುವ ಕುರಿತು ಸಾಕಷ್ಟು ಪ್ರಯಾಣಿಕರು ಅಸಮಾಧಾನ ವ್ಯಕ್ತಪಡಿಸಿದ್ದರ ಹಿನ್ನೆಲೆಯಲ್ಲಿ ಅದನ್ನು ಗಂಭೀರವಾಗಿ ಪರಿಗಣಿಸಿ ವಾಣಿಜ್ಯ ಉದ್ದೇಶಕ್ಕಾಗಿ ನೀಡಿದ್ದ ಕಟ್ಟಡಗಳನ್ನು ತೆರವುಗೊಳಿಸಿ ಪಾರ್ಕಿಂಗ್ ನಿರ್ಮಿಸಲು ಮುಂದಾಗಿದೆ.

         ಈಗಾಗಲೇ ವಾಣಿಜ್ಯ ಉದ್ದೇಶಗಳಿಗೆ ನೀಡಿರುವ ಅನುಮತಿಯನ್ನು ಹಿಂಪಡೆದು ಪ್ರಯಾಣಿಕರಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಬಿಎಂಆರ್‍ಸಿಎಲ್ ಇಂತಹ ಕ್ರಮಕ್ಕೆ ಮುಂದಾಗಿದೆ ಎಂದು ತಿಳಿಸಿದ್ದಾರೆ.

      ಪ್ರಸ್ತುತ ಮೈಸೂರು ರಸ್ತೆಯ ಮೆಟ್ರೋ ನಿಲ್ದಾಣದಲ್ಲಿ 1,567 ದ್ವಿಚಕ್ರ ವಾಹನಗಳು, 373 ಕಾರುಗಳು, ಬೈಯ್ಯಪ್ಪನಹಳ್ಳಿ ಮೆಟ್ರೋ ನಿಲ್ದಾಣದಲ್ಲಿ 1,514 ದ್ವಿಚಕ್ರ ವಾಹನಗಳು, 375 ಕಾರುಗಳು, ಯಲಚೇನಹಳ್ಳಿ ಮೆಟ್ರೋ ನಿಲ್ದಾಣದಲ್ಲಿ 927 ದ್ವಿಚಕ್ರ ವಾಹನಗಳು, 32 ಕಾರುಗಳು, ಎಸ್.ವಿ. ರಸ್ತೆಯಲ್ಲಿ 712 ದ್ವಿಚಕ್ರ ವಾಹನಗಳಉ, 164 ಕಾರುಗಳು, ನಾಗಸಂದ್ರದಲ್ಲಿ 371 ದ್ವಿಚಕ್ರ ವಾಹನಗಳು, 57 ಕಾರುಗಳು, ಬನಶಂಕರಿಯಲ್ಲಿ 319 ದ್ವಿಚಕ್ರ ವಾಹನಗಳು, 52 ಕಾರುಗಳಿಗೆ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ತಿಳಿಸಿದ್ದಾರೆ.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

 

Recent Articles

spot_img

Related Stories

Share via
Copy link