ಭುವನೇಶ್ವರ್:
ದೆಹಲಿಯಿಂದ ಭುವನೇಶ್ವರದ ಮದ್ಯೆ ಸಂಚರಿಸುವ ರಾಜಧಾನಿ ಎಕ್ಸ್‌ಪ್ರೆಸ್ ನಲ್ಲಿ ಿಂದು ಅಗ್ನಿ ಅವಘಡ ಸಂಭವಿಸಿದೆ. ಅದೃಷ್ಟವಷಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.
ರೈಲಿನ ಕೊನೆಯಲ್ಲಿರುವ ಜನರೇರ್ಟ್ ಕೋಚ್‌ನಲ್ಲಿ ಬೆಂಕಿ ಹೊತ್ತಿಕೊಂಡಿದೆ. ತಕ್ಷಣ ರೈಲನ್ನು ನಿಲ್ಲಿಸಿ ಬೇರೆ ಬೋಗಿಗಳನ್ನು ಬೇರ್ಪಡಿಸಿ ಬೆಂಕಿ ವ್ಯಾಪಿಸುವುದನ್ನು ತಡೆಯಲಾಗಿದೆ.ಅಗ್ನಿ ಶಾಮಕ ದಳದ ಸಿಬಂದಿಗಳು ಆಗಮಿಸಿ ಬೆಂಕಿಯನ್ನು ನಂದಿಸಿದ್ದಾರೆ.ಅವಘಡದಲ್ಲಿ ಯಾರೊಬ್ಬರಿಗೂ ಗಾಯಗಳಾಗಿಲ್ಲ ಎಂದು ತಿಳಿದು ಬಂದಿದೆ.ಕಳೆದ ತಿಂಗಳಿನಲ್ಲಿ ಇದೇ ರೈಲಿನಲ್ಲಿ ವಿಷಾಹಾರ ಸೇವಿಸಿ 20 ಕ್ಕೂ ಹೆಚ್ಚ ಪ್ರಯಾಣಿಕರು ಅಸ್ವಸ್ಥಗೊಂಡಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








