ಗುಬ್ಬಿ
ಪಟ್ಟಣದ ಮಹಾಲಕ್ಷ್ಮೀ ಬಡಾವಣೆಯಲ್ಲಿರುವ ಧಾರ್ಮಿಕ ಪ್ರಸಿಧ್ದವಾದ ಶ್ರೀಮಹಾಲಕ್ಷ್ಮೀ ಅಮ್ಮನವರ ದೇವಾಲಯದಲ್ಲಿ 16 ನೇ ವರ್ಷದ ವಾರ್ಷಿಕೋತ್ಸವದ ಅಂಗವಾಗಿ ವಿವಿಧ ಧಾರ್ಮಿಕ ಪೂಜಾ ಕಾರ್ಯಕ್ರಮಗಳನ್ನು ವಿಧಿವತ್ತಾಗಿ ನಡೆಸಲಾಯಿತು.
ವಾರ್ಷಿಕೋತ್ಸವದ ಅಂಗವಾಗಿ ಕಳೆದೆರಡು ದಿನಗಳಿಂದ ಧ್ವಜಾರೋಹಣ, ಆರತಿ ಸೇವೆ, ಅಭಿಷೇಕ, ಹೋಮ, ಶ್ರೀಲಕ್ಷ್ಮೀನಾರಾಯಣ ಕಲ್ಯಾಣೋತ್ಸವ ಸೇರಿದಂತೆ ವಿವಿಧ ದಾರ್ಮಿಕ ಪೂಜಾ ಕಾರ್ಯಕ್ರಮಗಳನ್ನು ನಡೆಸಲಾಯಿತು. ಸಂಜೆ ಶ್ರೀಮಹಾಲಕ್ಷ್ಮೀ ಅಮ್ಮನವರ ರಾಜಬೀದಿ ಉತ್ಸವವು ಅತ್ಯಂತ ವೈಭವಯುತವಾಗಿ ನಡೆಯಿತು.
ಪಟ್ಟಣ ಸೇರಿದಂತೆ ವಿವಿಧ ಭಾಗಗಳಿಂದ ಆಗಮಿಸಿದ್ದ ಭಕ್ತಾಧಿಗಳು ವಿವಿಧ ಪೂಜೆಗಳನ್ನು ಸಲ್ಲಿಸುವ ಮೂಲಕ ಅಮ್ಮನವರ ಕೃಫೆಗೆ ಪಾತ್ರರಾದರು. ಮೆ 12 ರಂದು ಅಭಿಷೇಕ ಕುಂಕುಮಾರ್ಚನೆ, ಅಮ್ಮನವರಿಗೆ ವಿಶೇಷ ಅಲಂಕಾರ ಮಾಡಲಾಗುವುದು ನಂತರ ಮದ್ಯಾನ್ಹ ಭಕ್ತಾಧಿಗಳಗೆ ಅನ್ನ ಸಂತರ್ಪಣೆಯನ್ನು ಏರ್ಪಡಿಲಾಗಿದೆ.
ಮೆ13 ರಂದು ಸುಪ್ರಭಾತ ಸೇವೆ, ಅವಭೃತ ಸ್ನಾನ, ವಸಂತ ಮಾಧವ ಪೂಜೆ, ಧ್ವಜಾವರೋಹಣ ಸೇರಿದಂತೆ ಧಾರ್ಮಿಕ ಪೂಜಾ ಕಾರ್ಯಕ್ರಮಗಳನ್ನು ವಿಧಿವತ್ತಾಗಿ ನಡೆಸಲಾಗುತ್ತಿದೆ ಎಂದು ದೇವಾಲಯ ಟ್ರಸ್ಟ್ ಅಧ್ಯಕ್ಷ ಎಂ.ನಾಗರಾಜು ತಿಳಿಸಿದ್ದಾರೆ.
ಪ್ರತಿವರ್ಷದಂತೆ ಅಮ್ಮನವರ ವಾರ್ಷಿಕೋತ್ಸವದ ಅಂಗವಾಗಿ ವಿವಿಧ ಧಾರ್ಮಿಕ ಪೂಜಾ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದ್ದು ಭಕ್ತಾಧಿಗಳು ಹೆಚ್ಚಿನ ಸಹಕಾರ ನೀಡುತ್ತಿದ್ದಾರೆ. ದೇವಾಲಯದ ಟ್ರಸ್ಟ್‍ನ ಪದಾಧಿಕಾರಿಗಳು ಸಂಪೂರ್ಣ ಸಹಕಾರ ನೀಡುತ್ತಿದ್ದು ಮುಂದಿನ ದಿನಗಳಲ್ಲಿ ಮತ್ತಷ್ಟು ಧಾರ್ಮಿಕ ಸೇವಾ ಕಾರ್ಯಕ್ರಮಗಳನ್ನು ನಡೆಸಲು ಚಿಂತನೆ ನಡೆಸಿರುವುದಾಗಿ ತಿಳಿಸಿದರು.ಧಾರ್ಮಿಕ ಕಾರ್ಯಕ್ರಮ ಗಳಲ್ಲಿ ದೇವಾಲಯ ಟ್ರಸ್ಟ್‍ನ ಪದಾಧಿಕಾರಿಗಳಾದ ಶಿವಲಿಂಗಾಚಾರ್, ಎಸ್.ಮರಿಬಸವಾಚಾರ್ ಸೇರಿದಂತೆ ಭಕ್ತಾಧಿಗಳು ಭಾಗವಹಿಸಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








