ಚಳ್ಳಕೆರೆ
ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಅನೇಕ ಮಹಾನ್ ಪುರುಷರ ಸಾಧನೆಯನ್ನು ನೆನಪಿಸಿಕೊಳ್ಳುವ ದೃಷ್ಠಿಯಲ್ಲಿ ಜಯಂತಿ ಕಾರ್ಯಕ್ರಮಗಳನ್ನು ನಡೆಸುವ ಮೂಲಕ ಸಾರ್ವಜನಿಕರಲ್ಲಿ ಜಾಗೃತಿಯನ್ನು ಮೂಡಿಸಲಾಗುತ್ತಿದೆ. ವಿಶೇಷವಾಗಿ ಭಗೀರಥ ಮಹರ್ಷಿಗಳ ಧಾರ್ಮಿಕ ಜಾಗೃತಿಯ ಬಗ್ಗೆ ಇನ್ನೂ ಹೆಚ್ಚಿನ ಜಾಗೃತಿ ಅಗತ್ಯವಿದೆ ಎಂದು ಉತ್ಸವ ಸಮಿತಿ ಅಧ್ಯಕ್ಷರು, ತಹಶೀಲ್ದಾರ್ ತುಷಾರ್ ಬಿ.ಹೊಸೂರ್ ತಿಳಿಸಿದರು.
ಅವರು, ಶನಿವಾರ ಇಲ್ಲಿನ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಭಗೀರಥ ಮಹಿರ್ಷಗಳ ಭಾವಚಿತ್ರಕ್ಕೆ ಪುಪ್ಪಾರ್ಚನೆ ಸಲ್ಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡುತ್ತಾ, ಈ ಹಿಂದೆ ಧಾರ್ಮಿಕ ವಿಚಾರಗಳ ಜಾಗೃತಿ ಮೂಡಿಸುವಲ್ಲಿ ಎಲ್ಲೆಡೆ ನಿರಾಸೆ ವಾತಾವರಣವಿದ್ದರೂ ಸಹ ಭಗೀರಥ ಮಹರ್ಷಿಗಳು ಅನೇಕ ಸಮಸ್ಯೆಗಳನ್ನು ಎದುರಿಸಿ ಧಾರ್ಮಿಕ ಕ್ರಾಂತಿಯನ್ನು ಮೂಡಿಸುವಲ್ಲಿ ಸಫಲವಾದರು. ಅವರ ಮಹಾನ್ ಸೇವೆಯನ್ನು ಸ್ಮರಿಸುವ ಕಾರ್ಯವನ್ನು ನಾವೆಲ್ಲರೂ ನಿತ್ಯವೂ ತಪ್ಪದೆ ಮಾಡಬೇಕೆಂದು ಮನವಿ ಮಾಡಿದರು. ಕಾರ್ಯಕ್ರಮದಲ್ಲಿ ಶಿರಸ್ಥೇದಾರ್ ಮಂಜುನಾಥಸ್ವಾಮಿ, ಚಂದ್ರಶೇಖರ್, ಕಂದಾಯಾಧಿಕಾರಿ ಶರಣಬಸಪ್ಪ, ಗ್ರಾಮ ಲೆಕ್ಕಾಧಿಕಾರಿ ರಾಜೇಶ್, ಸಿ.ಶ್ರೀನಿವಾಸ್ ಹಾಗೂ ಸಮುದಾಯದ ಮುಖಂಡರು ಭಾಗವಹಿಸಿದ್ದರು.