ಪ್ರತಿಭೆ ಅನಾವರಣಕ್ಕೆ ಬೇಸಿಗೆ ಶಿಬಿರ ಸಹಕಾರಿ

ದಾವಣಗೆರೆ :

    ಮಕ್ಕಳಲ್ಲಿ ಅಡಗಿರುವ ಸುಪ್ತ ಪ್ರತಿಭೆಯ ಅನಾವರಣಕ್ಕೆ ಬೇಸಿಗೆ ಶಿಬಿರಗಳು ಸಹಕಾರಿಯಾಗಿವೆ ಎಂದು ನೆರಳು ಬೀಡಿ ಕಾರ್ಮಿಕರ ಯೂನಿಯನ್ ಅಧ್ಯಕ್ಷೆ ಜಬೀನ ಖಾನಂ ಅಭಿಪ್ರಾಯಪಟ್ಟರು.

      ನೆರಳು ಬೀಡಿ ಕಾರ್ಮಿಕರ ಯೂನಿಯನ್ ಕಚೇರಿಯಲ್ಲಿ ಬುಧವಾರದಿಂದ ನೆರಳು ಬೀಡಿ ಕಾರ್ಮಿಕರ ಯೂನಿಯನ್, ಕರ್ನಾಟಕ ಗಾರ್ಮೆಂಟ್ಸ್ ವರ್ಕ್‍ರ್ಸ್ ಯೂನಿಯನ್, ಮನೆಗೆಲಸ ಕಾರ್ಮಿಕರ ಯೂನಿಯನ್, ಶ್ರಮ ಶಕ್ತಿ ಕಟ್ಟಡ ಕಾರ್ಮಿಕ ಯೂನಿಯನ್ ಇವುಗಳ ಸಂಯುಕ್ತಾಶ್ರಯದಲ್ಲಿ ಕಾರ್ಮಿಕರ ಮಕ್ಕಳಿಗಾಗಿ ಏರ್ಪಡಿಸಿರುವ ಬೇಸಿಗೆ ಶಿಬಿರದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

      ಕಾರ್ಮಿಕರ ಮಕ್ಕಳಿಗಾಗಿ ಮೂರು ದಿನಗಳ ಕಾಲ ಬೇಸಿಗೆ ಶಿಬಿರ ಆಯೋಜಿಸಲಾಗಿದ್ದು, ಶಿಬಿರದಲ್ಲಿ ಪಾಲ್ಗೊಳ್ಳುವ ಸಂಪನ್ಮೂಲ ವ್ಯಕ್ತಿಗಳು ಮಾಡುವ ಉಪನ್ಯಾಸ ಸೇರಿದಂತೆ ಇತರೆ ಕಾರ್ಯ ಚಟುವಟಿಕೆಗಳನ್ನು ಆಸಕ್ತಿಯಿಂದ ಕಲಿತು ಮಕ್ಕಳು ನಿಮ್ಮಲ್ಲಿರುವ ಪ್ರತಿಭೆಯ ಅನಾವರಣಕ್ಕೆ ಪ್ರಯತ್ನ ಮಾಡಬೇಕೆಂದು ಕಿವಿಮಾತು ಹೇಳಿದರು.ಪತ್ರಕರ್ತ ಹೆಚ್.ಎನ್.ಪ್ರಕಾಶ್ ಬೇಸಿಗೆ ಶಿಬಿರಕ್ಕೆ ಚಾಲನೆ ನೀಡಿದರು.
ನೆರಳು ಬೀಡಿ ಕಾರ್ಮಿಕರ ಯೂನಿಯನ್ ಉಪಾಧ್ಯಕ್ಷೆ ಶಿರಿನ್‍ಬಾನು, ಪ್ರಧಾನ ಕಾರ್ಯದರ್ಶಿ ಎಂ.ಕರಿಬಸಪ್ಪ, ಅನ್ವರ್ ಖಾನ್ ಮತ್ತಿತರರು ಹಾಜರಿದ್ದರು.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link