ಶ್ರೀನಗರ :

ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ನಡೆದ ಎನ್ಕೌಂಟರ್ನಲ್ಲಿ ಭದ್ರತಾ ಪಡೆಗಳ ಸಿಬ್ಬಂದಿ ಮೂವರು ಉಗ್ರರನ್ನು ಹೊಡೆದುರುಳಿಸಿದ್ದಾರೆ.
ಇಂದು(ಗುರುವಾರ) ಬೆಳಗ್ಗೆ ದಾಲಿ ಪೋರಾ ಪ್ರದೇಶದಲ್ಲಿ ಉಗ್ರರ ಇರುವಿಕೆಯ ಖಚಿತ ಮಾಹಿತಿ ಮೇರೆಗೆ ಉಗ್ರರೊಂದಿಗೆ ಸೇನಾಪಡೆಗಳು ಭೀಕರ ಗುಂಡಿನ ಕಾಳಗ ನಡೆಸಿದ್ದು, ಗುಂಡಿನ ಚಕಮಕಿಯಲ್ಲಿ ಓರ್ವ ಯೋಧ ಹುತಾತ್ಮರಾಗಿದ್ದು, ಇಬ್ಬರು ಯೋಧರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೂವರು ಉಗ್ರರನ್ನು ಹತ್ಯೆಗೈಯಲಾಗಿದೆ.
ಸ್ಥಳದಲ್ಲಿ ಭಾರೀ ಸಂಖ್ಯೆಯ ಸೇನಾ ಪಡೆಗಳು ಕಟ್ಟೆಚ್ಚರ ವಹಿಸಿವೆ. ಘಟನೆ ಬಳಿಕ ಪುಲ್ವಾಮಾದಲ್ಲಿ ಕರ್ಫ್ಯೂ ಹೇರಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








