ಚೆನ್ನೈ:
ಮಧುರೈನ ತಿರುಪ್ಪರನ್ಕುಂದ್ರಮ್ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಪ್ರಚಾರದಲ್ಲಿ ತೊಡಗಿದ್ದ ವೇಳೆ ನಟ ಹಾಗೂ ಮಕ್ಕಳ್ ನೀಧಿ ಮಯ್ಯಂ ಪಕ್ಷದ ಸ್ಥಾಪಕ ಕಮಲ್ ಹಾಸನ್ ಮೇಲೆ ಚಪ್ಪಲಿ ತೂರಲಾಗಿದೆ.
ಮೊನ್ನೆ ಚುನಾವಣಾ ಪ್ರಚಾರದಲ್ಲಿ ಕಮಲ್ ಹಾಸನ್, ಮಹಾತ್ಮ ಗಾಂಧಿ ಅವರನ್ನು ಕೊಂದ ನಾಥೂರಾಂ ಗೋಡ್ಸೆ ಸ್ವತಂತ್ರ ಭಾರತದ ಮೊದಲ ಭಯೋತ್ಪಾದಕ ಹಿಂದೂ ಎಂದು ಹೇಳಿದ್ದರು. ಇದು ಭಾರಿ ಚರ್ಚೆಗೆ ಕಾರಣವಾಗಿ ಕಮಲ್ ಹಾಸನ್ ವಿರುದ್ಧ ಹಲವು ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದರು.
ನಿನ್ನೆ ಕಮಲ್ ಹಾಸನ್ ಚುನಾವಣಾ ಪ್ರಚಾರದಲ್ಲಿ ಜನರನ್ನುದ್ದೇಶಿಸಿ ಮಾತನಾಡುತ್ತಿದ್ದಾಗ, ಗುಂಪಿನಿಂದ ವೇದಿಕೆ ಕಡೆಗೆ ಚಪ್ಪಲಿ ಎಸೆಯಲಾಗಿದೆ. ಆದ್ರೆ ಕಮಲ್ ಹಾಸನ್ ಅವರಿಗೆ ಚಪ್ಪಲಿ ತಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಸ್ತುತ ಘಟನೆಗೆ ಸಂಬಂಧಿಸಿದಂತೆ ಮಕ್ಕಳ್ ನೀಧಿ ಮಯ್ಯಂ ಪಕ್ಷದ ಮುಖಂಡರು ಪೊಲೀಸರಿಗೆ ದೂರು ನೀಡಿದ್ದು, ತನಿಖೆ ನಡೆಸುತ್ತಿರುವ ಪೊಲೀಸರು ಬಿಜೆಪಿ ಮತ್ತು ಹನುಮಾನ್ ಸೇನೆಯ 11 ಕಾರ್ಯಕರ್ತರನ್ನು ಬಂಧಿಸಿದ್ದಾರೆ ಎನ್ನಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
![](https://prajapragathi.com/wp-content/uploads/2019/05/Kamal-Haasan.gif)