ಮೈಸೂರು:
ಮೈಸೂರಿನಲ್ಲಿ ಇಂದು ಪೊಲೀಸರಿಂದ ಎನ್ಕೌಂಟರ್ ನಡೆದಿದೆ. ಮನಿ ಡಬ್ಲಿಂಗ್ ದಂಧೆಯಲ್ಲಿ ತೊಡಗಿದ್ದ ಬಾಂಬೆ ಮೂಲದ ವ್ಯಕ್ತಿಗಳ ಮೇಲೆ ಪೊಲೀಸರು ಗುಂಡಿನ ದಾಳಿ ನಡೆದಿದ್ದಾರೆ. ಹೆಬ್ಬಾಳ್ ರಿಂಗ್ ರಸ್ತೆ ಬಳಿಯ ಅಪಾರ್ಟ್ಮೆಂಟವೊಂದರಲ್ಲಿ ಆರೋಪಿಗಳು ದಂಧೆ ನಡೆಸುತ್ತಿದ್ದ ಬಗ್ಗೆ ಪೊಲೀಸರಿಗೆ ಮಾಹಿತಿ ಬಂದಿತ್ತು.
ಈ ಹಿನ್ನೆಲೆ ವಿಜಯನಗರ ಠಾಣೆ ಇನ್ಸ್ಪೆಕ್ಟರ್ ಬಿ.ಜಿ.ಕುಮಾರ್ ತಂಡ ಸ್ಥಳಕ್ಕೆ ದೌಡಾಯಿಸಿತ್ತು. ಪೊಲೀಸರು ಬರುತ್ತಿದ್ದಂತೆ ಆರೋಪಿಗಳು ಇನ್ಸ್ಪೆಕ್ಟರ್ಗೆ ಗನ್ ತೋರಿಸಿದ್ದಾರೆ. ಹೀಗಾಗಿ ಇನ್ಸ್ಪೆಕ್ಟರ್ ಬಿ.ಜಿ.ಕುಮಾರ್ ಮೂವರು ಆರೋಪಿಗಳ ತಂಡದ ಮೇಲೆ ಫೈರಿಂಗ್ ಮಾಡಿದ್ದಾರೆ.
ಈ ವೇಳೆ ಓರ್ವ ಆರೋಪಿಗೆ ಗುಂಡು ತಗುಲಿದೆ.ಗಾಯಾಳುವನ್ನ ಆಸ್ಪತ್ರೆಗೆ ದಾಖಲು ಮಾಡೋ ವೇಳೆ ಸಾವನ್ನಪ್ಪಿದ್ದಾನೆ. ಸದ್ಯ ಆತನ ಮೃತದೇಹವನ್ನು ಮೈಸೂರಿನ ಕೆ.ಆರ್.ಆಸ್ಪತ್ರೆಯಲ್ಲಿ ಇರಿಸಲಾಗಿದೆ. ಇನ್ನು ಮತ್ತಿಬ್ಬರು ಆರೋಪಿಗಳು ಪರಾರಿಯಾಗಿದ್ದಾರೆ.