ಮತ ಎಣಿಕೆ :ಸಕಲ ಸಿದ್ಧತೆ ಪೂರ್ಣ ..!!!

ಬೆಂಗಳೂರು

        (ಮೇ.23) ನಡೆಯುವ ಬೆಂಗಳೂರು ಉತ್ತರ, ಕೇಂದ್ರ, ದಕ್ಷಿಣ ಲೋಕಸಭಾ ಕ್ಷೇತ್ರಗಳ ಮತ ಎಣಿಕೆಗೆ ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗಿದ್ದು ಮತ ಎಣಿಕೆ ಕೇಂದ್ರದ ಸುತ್ತ ಬಿಗಿ ಬಂದೋಬಸ್ಥ್ ವ್ಯವಸ್ಥೆ ಕೈಗೊಂಡು ನಗರದಲ್ಲಿ ನಿಷೇದಾಜ್ಞೆ ಜಾರಿಗೊಳಿಸಿ ಕಟ್ಟೆಚ್ಚರ ವಹಿಸಲಾಗಿದೆ.

      ಬೆಂಗಳೂರು ಉತ್ತರ ಕ್ಷೇತ್ರದ ಮತ ಎಣಿಕೆ ಸೆಂಟ್ ಜೋಸೆಫ್ ಇಂಡಿಯನ್ ಹೈಸ್ಕೂಲ್, ಕೇಂದ್ರ ಲೋಕಸಭಾ ಕ್ಷೇತ್ರದ ಮತ ಎಣಿಕೆ ಮೌಂಟ್ ಕಾರ್ಮೆಲ್ ಮಹಿಳಾ ಪಿಯು ಕಾಲೇಜು ಮತ್ತು ದಕ್ಷಿಣ ಲೋಕಸಭಾ ಕ್ಷೇತ್ರದ ಮತ ಎಣಿಕೆಯು ಎಂ.ಎಸ್.ಎಂ.ಆರ್.ವಿ. ಪಿಯು ಕಾಲೇಜಿನಲ್ಲಿ ಗುರುವಾರ ಮತ ಏಣಿಕೆ ನಡೆಯಲಿದೆ.

     ಗುರುವಾರ ಮತ ಎಣಿಕೆ ಕಾರ್ಯವು ಬೆಳಿಗ್ಗೆ 8 ರಿಂದ ಆರಂಭವಾಗಲಿದೆ. ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ನಿಗದಿಪಡಿಸಿದ ಮತ ಎಣಿಕೆ ಕೊಠಡಿಗಳಲ್ಲಿ ಸಂಬಂಧಪಟ್ಟ ಸಹಾಯಕ ಚುನಾವಣಾಧಿಕಾರಿಗಳ ಸಮ್ಮುಖದಲ್ಲಿ ಆರಂಭವಾಗಲಿದೆ ಎಂದು ಬಿಬಿಎಂಪಿ ಆಯಕ್ತ ಹಾಗೂ ಚುನಾವಣಾಧಿಕಾರಿ ಮಂಜುನಾರ್ಥ ಪ್ರಸಾದ್ ಹಾಗೂ ನಗರ ಪೊಲೀಸ್ ಆಯುಕ್ತ ಸುನೀಲ್ ಕುಮಾರ್‍ಅವರು ಜಂಟಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

      ಇವಿಎಂ ಮತ ಎಣಿಕೆ ನಂತರ, ಪ್ರತಿ ವಿಧಾನಸಭಾ ಕ್ಷೇತ್ರವಾರು ಲಾಟರಿ ಮೂಲಕ 5 ಮತಗಟ್ಟೆಗಳ ವಿವಿ ಪ್ಯಾಟ್‍ಗಳನ್ನು ಆರಿಸಿ, ವಿವಿ ಪ್ಯಾಟ್ ಸ್ಲಿಪ್‍ಗಳ ಎಣಿಕೆ ಕಾರ್ಯವನ್ನು ಕೈಗೆತ್ತಿಕೊಳ್ಳಲಾಗುವುದು ಎಂದ ಅವರು ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಶೇ. 54.66, ಬೆಂಗಳೂರು ಕೇಂದ್ರ ಕ್ಷೇತ್ರದಲ್ಲಿ 54.28, ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ 53.47 ರಷ್ಟು ಮತದಾನವಾಗಿದೆ ಎಂದು ಅವರು ತಿಳಿಸಿದರು.

     ಮತ ಎಣಿಕೆಗೆ ಅನುಕೂಲವಾಗುವಂತೆ, ಪ್ರತಿ ವಿಧಾನಸಭಾ ಕ್ಷೇತ್ರದ ಎಣಿಕೆ ಕೊಠಡಿಯಲ್ಲಿ 14 ಮತ ಎಣಿಕೆ ಟೇಬಲ್‍ಗಳನ್ನು ಇಡಲಾಗಿದೆ. 300ಕ್ಕೂ ಹೆಚ್ಚು ಮತಗಟ್ಟೆಗಳಿರುವ ವಿಧಾನಸಭಾ ಕ್ಷೇತ್ರಗಳಲ್ಲಿ ಹೆಚ್ಚುವರಿ ಮತ ಎಣಿಕೆ ಟೇಬಲ್‍ಗಳ ವ್ಯವಸ್ಥೆ ಮಾಡಲಾಗಿದೆ ಎಂದು ಅವರು ತಿಳಿಸಿದರು.

     ಮತ ಎಣಿಕೆ ಕೇಂದ್ರಗಳಿಗೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಮೊಬೈಲ್ ಅಥವಾ ಯಾವುದೇ ಎಲೆಕ್ಟ್ರಾನಿಕ್ ಉಪಕರಣಗಳು ಮತ್ತು ಬ್ಯಾಗ್‍ಗಳೊಂದಿಗೆ ಪ್ರವೇಶಿಸುವುದನ್ನು ನಿಷೇಧಿಸಲಾಗಿದೆ ಎಂದು ಅವರು ತಿಳಿಸಿದರು.

     ಭದ್ರತಾ ದೃಷ್ಟಿಯಿಂದ ಪ್ರತಿ ಮತ ಎಣಿಕೆ ಕೇಂದ್ರಗಳಲ್ಲಿ ಮತ ಎಣಿಕೆ ಏಜೆಂಟರುಗಳಿಗೆ ಪ್ರತ್ಯೇಕ ಆಸನ ವ್ಯವಸ್ಥೆ ಕಲ್ಪಿಸಲಾಗಿದೆ. ಮತ ಎಣಿಕೆ ಏಜೆಂಟರುಗಳಿಗೆ, ಮತ ಸಿಬ್ಬಂದಿಗಳಿಗೆ, ಪ್ರತಿ ವಿಧಾನಸಭಾ ಕ್ಷೇತ್ರಕ್ಕೂ ಪ್ರತ್ಯೇಕ ಬಣ್ಣದ ಗುರುತಿನ ಚೀಟಿಗಳನ್ನು ವಿತರಿಸಲಾಗುವುದು ಎಂದು ಮಂಜುನಾಥ್ ಪ್ರಸಾದ್ ಅವರು ತಿಳಿಸಿದರು.

     ಪತ್ರಿಕಾಗೋಷ್ಠಿಯಲ್ಲಿ ಬೆಂಗಳೂರು ನಗರ ಜಿಲ್ಲಾಧಿಕಾರಿ ವಿಜಯ್ ಶಂಕರ್ ಹೆಚ್ಚುವರಿ ಪೊಲೀಸ್ ಆಯುಕ್ತರಾದ ಸೀಮಂತ್‍ಕುಮಾರ್ ಸೀಂಗ್ ಹಾಗೂ ಸಹಾಯಕ ಜಿಲ್ಲಾ ಚುನಾವಣಾಧಿಕಾರಿಗಳು ಉಪಸ್ಥಿತರಿದ್ದರು.

 

Recent Articles

spot_img

Related Stories

Share via
Copy link