ಹಾವೇರಿ
ಸೋಮವಾರ ಮೊಟೇಬೆನ್ನೂರ ಹಾಗೂ ರಾಮಗೊಂಡನಹಳ್ಳಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ಗ್ರಾಮಗಳ ಕುಡಿಯುವ ನೀರಿನ ಸಮಸ್ಯೆ ಕುರಿತಂತೆ ಸಾರ್ವಜನಕರೊಂದಿಗೆ ಚರ್ಚಿಸಿದರು.
ಮೊಟೇಬೆನ್ನೂರು ಮತ್ತು ರಾಮಗೊಂಡನಹಳ್ಳಿಗೆ ಖಾಸಗಿ ಕೊಳವೆಬಾವಿಗಳ ಮೂಲಕ ನೀರು ಪೂರೈಕೆ ಮಾಡಲಾಗುತ್ತಿದೆ. ಸರ್ಕಾರಿ ಕೊಳವೆಬಾವಿ ಹಾಗೂ ಖಾಸಗಿ ಕೊಳವೆಬಾವಿಗಳಲ್ಲಿ ನೀರಿನ ಇಳುವರಿ ದಿನದಿಂದ ದಿನಕ್ಕೆ ಇಳಿಮುಖವಾಗುತ್ತಿದೆ. ಕೆಲ ವಾರ್ಡುಗಳಿಗೆ ನಿಗದಿತ ಪ್ರಮಾಣದಲ್ಲಿ ನೀರು ಪೂರೈಕೆಯಾಗುತ್ತಿಲ್ಲ. ಹೆಚ್ಚುವರಿಯಾಗಿ ಕೊಳವೆಬಾವಿ ಕೊರೆಸಿ ನೀರು ಪೊರೈಸಲು ಗ್ರಾಮಸ್ಥರು ಜಿಲ್ಲಾಧಿಕಾರಿಗಳಿಗೆ ಬೇಡಿಕೆ ಸಲ್ಲಿಸಿದರು.
ತಾಲೂಕು ಪಂಚಾಯತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳು ಹಾಗೂ ಗ್ರಾಮೀಣ ಕುಡಿಯುವ ನೀರಿ ಹಾಗೂ ನೈರ್ಮಲ್ಯ ಇಲಾಖೆ ಅಭಿಯಂತರರಿಗೆ ಸೂಚಿಸಿ ನೀರಿನ ಇಳುವರಿಯನ್ನು ಅಂತರ್ಜಲ ಇಲಾಖೆಯ ಅಭಿಯಂತರರನ್ನು ಕರೆಸಿ ಪರೀಕ್ಷಿಸಿ ಹಾಗೂ ಪರ್ಯಾಯವಾಗಿ ಕೊಳವೆಬಾವಿ ಕೊರೆಸಲು ಪಾಯಿಂಟ್‍ಗಳನ್ನು ಗುರುತಿಸಿ. ನೀರು ಲಭ್ಯವಿದ್ದರೆ ಕೊಳವೆಬಾವಿ ಕೊರೆಸಿ ಇಲ್ಲವಾದರೆ ಟ್ಯಾಂಕರ್ ಮೂಲಕ ನೀರು ಪೂರೈಸಲು ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ