ಕೊಟ್ಟೂರು
ಸಮೀಪದ ಹ್ಯಾಳ್ಯಾ ಗ್ರಾಮದಲ್ಲಿ ಗುರುವಾರ ಬೈಕ್ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್‍ನಲ್ಲಿ ಪ್ರಯಾಣಿಸುತ್ತಿದ್ದ ಸವಾರ ಪ್ರೇರಕ(18) ಸ್ಥಳದಲ್ಲಿಯೇ ಮರಣ ಹೊಂದಿದ್ದಾನೆ.ಬೈಕ್‍ನಲ್ಲಿದ್ದ ಮತ್ತೊಬ್ಬ ಹುಡುಗ ಸಚಿನ್(16)ಗೆ ತೀವ್ರಗಾಯಗಳಾಗಿದ್ದು ಹೆಚ್ಚಿನ ಚಿಕಿತ್ಸೆಗೆ ದಾವಣಗೆರೆ ಆಸ್ಪತ್ರೆಗೆ ಕಳುಹಿಸಲಾಗಿದೆ. ಬೈಕ್‍ನಲ್ಲಿ ಇನ್ನೊಬ್ಬಾತ ಕರೆಗೌಡನಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಕೊಟ್ಟೂರುನಿಂದ ಹ್ಯಾಳ್ಯಾಕ್ಕೆ ಹೋಗುತ್ತಿದ್ದ ಲಾರಿಯ ಚಾಲಕ ಇದ್ದಕ್ಕಿದಂತೆ ಲಾರಿಯನ್ನು ಬಲಕ್ಕೆ ತಿರುವಿದಾಗ ಹಿಂಬದಿಯಲ್ಲಿ ಬರುತ್ತಿದ್ದ ಬೈಕ್ ನೇರವಾಗಿ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಈ ಅಪಘಾತ ಸಂಭವಿಸಿದಂತೆ ಲಾರಿ ಚಾಲಕ ಲಾರಿಯನ್ನು ಅಲ್ಲಿಯೇ ಬಿಟ್ಟು ನಾಪತ್ತೆಯಾಗಿದ್ದಾನೆ. ಕೊಟ್ಟೂರು ಪೊಲೀಸರು ಕೇಸ್ ದಾಖಲು ಮಾಡಿಕೊಂಡು ತನಿಖೆ ನಡೆಸುತ್ತಿದ್ದಾರೆ.