ಸೂರತ್:
ಸೂರತ್ನ ವಾಣಿಜ್ಯ ಸಂಕೀರ್ಣವೊಂದರಲ್ಲಿ ಅಗ್ನಿ ದುರಂತ ಸಂಭವಿಸಿದ್ದು ಕನಿಷ್ಠ 15 ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ. ಗುಜರಾತ್ನ ಸೂರತ್ನಲ್ಲಿ ವಾಣಿಜ್ಯ ಸಂಕೀರ್ಣದ 3ನೇ ಮಹಡಿಯಲ್ಲಿದ್ದ ಕೋಚಿಂಗ್ ಸೆಂಟರ್ನಲ್ಲಿ ಬೆಂಕಿ ಕಾಣಿಸಿಕೊಂಡಿರುವುದೇ ಈ ಅಗ್ನಿ ದುರಂತಕ್ಕೆ ಕಾರಣವಾಗಿದೆ. ಶಾರ್ಟ್ ಸರ್ಕೀಟ್ನಿಂದ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಮಾತ್ರದಲ್ಲಿ ಎಲ್ಲೆಡೆ ವ್ಯಾಪಿಸಿತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಇನ್ನು ಮಹಡಿಯಲ್ಲಿರುವ ಜನರನ್ನು ರಕ್ಷಿಸುವ ಕಾರ್ಯಾಚರಣೆಯನ್ನೂ ಆರಂಭಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
#Visuals Gujarat: A fire broke out on the second floor of a building in Sarthana area of Surat; 18 fire tenders at the spot. More details awaited. pic.twitter.com/iY0O588Pom
— ANI (@ANI) May 24, 2019
ಘಟನೆ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್ ಮೂಲಕ ಸಂತಾಪ ವ್ಯಕ್ತಪಡಿಸಿದ್ದಾರೆ.
Extremely anguished by the fire tragedy in Surat. My thoughts are with bereaved families. May the injured recover quickly. Have asked the Gujarat Government and local authorities to provide all possible assistance to those affected.
— Narendra Modi (@narendramodi) May 24, 2019
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ