ಬೆಳಗ್ಗೆ 5 ಗಂಟೆ ಸುಮಾರಿಗೆ ಬೆಂಗಳೂರಿನ ಪದ್ಮನಾಭನಗರದಲ್ಲಿರುವ ಮದರ್ ವುಡ್ ಆಸ್ಪತ್ರೆಯಲ್ಲಿ ಯೋಗೀಶ್ ಪತ್ನಿ ಸಾಹಿತ್ಯ ಅವರು ಇಂದು ಬೆಳಗ್ಗೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಸದ್ಯಕ್ಕೆ ತಾಯಿ ಮತ್ತು ಮಗು ಇಬ್ಬರು ಆರೋಗ್ಯವಾಗಿದ್ದಾರೆ ಎಂದು ತಿಳಿದು ಬಂದಿದೆ.
ನಟ ಯೋಗೀಶ್ ಕುಟುಂಬದವರು ತಮ್ಮ ಮನೆಗೆ ಯುವರಾಣಿ ಬಂದಿದ್ದಾಳೆ ಎಂದು ಸಂತೋಷ ವ್ಯಕ್ತಪಡಿಸಿದ್ದಾರೆ. ಇನ್ನೂ ತಂದೆಯಾದ ಯೋಗಿ ತಮ್ಮ ಮುದ್ದು ಮಗಳನ್ನು ತಮ್ಮ ಕೈಯಲ್ಲಿ ಹಿಡಿದುಕೊಂಡು ಖುಷಿ ಪಟ್ಟಿದ್ದಾರೆ.
2017 ನವೆಂಬರ್ 2ರಂದು ಸಾಹಿತ್ಯ-ಯೋಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಏಪ್ರೀಲ್ 15ರಂದು ಅದ್ದೂರಿಯಾಗಿ ಸಾಹಿತ್ಯಾರ ಸೀಮಂತ ಕಾರ್ಯಕ್ರಮ ಅದ್ದೂರಿಯಾಗಿ ನಡೆದಿತ್ತು. ಇದೀಗ ಈ ದಂಪತಿ ಹೆಣ್ಣು ಮಗುವಿನ ತಂದೆ-ತಾಯಿಯಾಗಿದ್ದು, ತಾಯಿ ಹಾಗೂ ಮಗು ಇಬ್ಬರು ಆರೋಗ್ಯವಾಗಿ ಇರುವುದಾಗಿ ತಿಳಿದು ಬಂದಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
