ಬೆಂಗಳೂರು:
ಎರಡನೇ ಶನಿವಾರದ ಜೊತೆಗೆ ನಾಲ್ಕನೇ ಶನಿವಾರವೂ ರಜೆ ಸಿಗಲಿದ್ದು, ಈ ಮೂಲಕ ರಾಜ್ಯ ಸರ್ಕಾರಿ ನೌಕರರಿಗೆ ಬಂಪರ್ ಕೊಡುಗೆ ನೀಡಲಾಗಿದೆ.
ಹೌದು, ಸರ್ಕಾರಿ ನೌಕರರ ರಜೆ ದಿನ ಕುರಿತಂತೆ ಸಚಿವ ಕೃಷ್ಣಬೈರೇಗೌಡ ನೇತೃತ್ವದಲ್ಲಿ ಸಂಪುಟ ಉಪ ಸಮಿತಿ ರಚಿಸಲಾಗಿದ್ದು, ಸರ್ಕಾರಿ ನೌಕರರಿಗೆ 4 ನೇ ಶನಿವಾರವೂ ರಜೆ ಘೋಷಿಸುವಂತೆ ಶಿಫಾರಸ್ಸು ಮಾಡಲಾಗಿತ್ತು. ಈ ಪ್ರಸ್ತಾಪಕ್ಕೆ ಮುಖ್ಯಮಂತ್ರಿ ಕುಮಾರಸ್ವಾಮಿ ಅನುಮೋದನೆ ನೀಡಿದ್ದಾರೆ.
ಈ ಪ್ರಸ್ತಾವನೆಗೆ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಈಗ ಅನುಮೋದನೆ ನೀಡಿರುವುದರಿಂದ ಇನ್ನು ಮುಂದೆ ಸರ್ಕಾರಿ ನೌಕರರಿಗೆ ಎರಡನೇ ಶನಿವಾರ ಹಾಗೂ ನಾಲ್ಕನೇ ಶನಿವಾರಗಳಂದು ಸಹ ರಜೆ ಸಿಗಲಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ