ನೂತನ ಸರ್ಕಾರದಿಂದ ಹೊರಗುಳಿದ ಜೇಟ್ಲಿ..!!

ನವದೆಹಲಿ:

    ಪ್ರಚಂಡ ಬಹುಮತದಿಂದ ಗೆದ್ದ ಬಿಜೆಪಿಯ ನೂತನ ಸರ್ಕಾರದಲ್ಲಿ ನನಗೆ ಯಾವುದೇ ಜವಾಬ್ದಾರಿ ಕೊಡಬೇಡಿ.ಕಳೆದ ಎನ್ ಡಿಎ ಸರ್ಕಾರದಲ್ಲಿ ಸಚಿವನಾಗಿ ಕಾರ್ಯ ನಿರ್ವಹಿಸಿದ ತೃಪ್ತಿ ನನಗಿದೆ. ಪ್ರಸ್ತುತ ನನಗೆ ಆರೋಗ್ಯದ ವಿಚಾರದಲ್ಲಿ ವಿಶ್ರಾಂತಿಯ ಅಗತ್ಯವಿದ್ದು . ಈ ಬಾರಿ ಸಚಿವ ಸಂಪುಟ ಸೇರಲು ನಾನು ಅಸಹಾಯಕನಾಗಿದ್ದೇನೆ ಎಂದು ಅರುಣ್ ಜೇಟ್ಲಿ ತಾಅವು ಪ್ರಧಾನಿಯವರಿಗೆ ಬರೆದ ಪತ್ರದಲ್ಲಿ ಹೇಳಿದ್ದಾರೆ.

      ಮೋದಿ ನೇತೃತ್ವದ ಎನ್ ಡಿಎ ಸರ್ಕಾರ ಗುರುವಾರ ಪ್ರಮಾಣವಚನ ಸ್ವೀಕರಿಸಲಿದ್ದು, ಇದಕ್ಕೂ ಮುನ್ನ ಜೇಟ್ಲಿ ಅವರು ಈ ಪತ್ರ ಬರೆದಿದ್ದಾರೆ.ಬಿಜೆಪಿ ನನಗೆ ಪ್ರತಿಬಾರಿ ಜವಾಬ್ದಾರಿಯನ್ನು ನೀಡಿ ಆಶೀರ್ವದಿಸಿ ಜನರ ಸೇವೆ ಮಾಡುವ ಅವಕಾಶ ಕಲ್ಪಿಸಿದೆ. ಮೊದಲ ಬಾರಿ ಎನ್ ಡಿಎ ಸರ್ಕಾರ ಅಧಿಕಾರಕ್ಕೆ ಬಂದಾಗ, ಪಕ್ಷ ಸಂಘಟನೆ, ವಿರೋಧ ಪಕ್ಷದಲ್ಲಿದ್ದಾಗಲೂ ನನಗೆ ಜವಾಬ್ದಾರಿ ನೀಡಿದೆ.

       ಆರೋಗ್ಯ ಮತ್ತು ಟ್ರೀಟ್ ಮೆಂಟ್ ಗೆ ಹೆಚ್ಚಿನ ಗಮನ ಕೊಡಬೇಕಾದ ಹಿನ್ನೆಲೆಯಲ್ಲಿ ನೂತನ ಬಿಜೆಪಿ ಸರ್ಕಾರದಲ್ಲಿ ತನಗೆ ಯಾವುದೇ ಸಚಿವ ಸ್ಥಾನ ನೀಡದಂತೆ ಪ್ರಧಾನಿ ನರೇಂದ್ರ ಮೋದಿ ಅವರಲ್ಲಿ ಜೇಟ್ಲಿ ಅವರು ಪತ್ರದ ಮೂಲಕ ವಿನಂತಿಸಿಕೊಂಡಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ

Recent Articles

spot_img

Related Stories

Share via
Copy link