ತಿಪಟೂರು :
ಉಚಿತ ಮತ್ತು ಕಡ್ಡಾಯ ಶಿಕ್ಷಣಕ್ಕಾಗಿ ಮಕ್ಕಳ ಹಕ್ಕು ಕಾಯಿದೆ 2009ರನ್ವಯ 6-14 ವಯೋಮಾನದ ಎಲ್ಲಾ ಮಕ್ಕಳಿಗೆ ಯಾವುದೇ ತಾರತಮ್ಯವಿಲ್ಲದೆ ಕಡ್ಡಾಯ, ಉಚಿತ ಹಾಗೂ ಗುಣಮಟ್ಟದ ಪ್ರಾಥಮಿಕ ಶಿಕ್ಷಣವನ್ನು ಒದಗಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಕ್ಷೇತ್ರಶಿಕ್ಷಣಾಧಿಕಾರಿ ಮಂಗಳಗೌರಮ್ಮ ತಿಳಿಸಿದರು.
ನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಬೋವಿಕಾಲೋನಿ ಆಂದೋಲಟಿ ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅವರು ಪ್ರತಿ ವರ್ಷದಂತೆ ಈ ವರ್ಷವೂ, ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ 5 ವರ್ಷ 10 ತಿಂಗಳು ತುಂಬಿದ ಮಕ್ಕಳನ್ನು ನೇರವಾಗಿ ಶಾಲೆಗೆ ದಾಖಲಿಸಲು, ಶಾಲೆಗೆ ಬರುತ್ತಿರುವ ಎಲ್ಲಾ ಮಕ್ಕಳನ್ನು ಶಾಲಾ ಪ್ರಾರಂಭದ ದಿನದಂದೇ ಶಾಲೆಗೆ ಹಾಜರಾಗುವಂತೆ ಮಾಡಲು ಹಾಗೂ ವಿವಿಧ ಕಾರಣಗಳಿಂದ ಪ್ರಾಥಮಿಕ ಶಿಕ್ಷಣ ಪೂರ್ಣಗೊಳಿಸದೇ ಶಾಲೆ ಬಿಟ್ಟ ಮಕ್ಕಳನ್ನು ಪುನಃ ಶಾಲೆಗೆ ಕರೆತರುವ ಉದ್ದೇಶದಿಂದ ದಿನಾಂಕ:16-05-2019 ರಿಂದ ದಿನಾಂಕ:29.05.2019 ರವರೆಗೆ ವಿಶೇಷ ದಾಖಲಾತಿ ಆಂದೋಲನವನ್ನು ಹಾಗೂ ದಿನಾಂಕ:29.05.2019 ರಿಂದ 30.06.2019 ರವರೆಗೆ ಸಾಮಾನ್ಯ ದಾಖಲಾತಿ ಆಂದೋಲನವನ್ನು ನಡೆಸಲಾಗುತ್ತಿದೆ.
ಸದರಿ ಕಾರ್ಯಕ್ರಮದಲ್ಲಿ ವಿವಿಧ ಜಾಗೃತಿ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಸಾರ್ವಜನಿಕರು, ಜನಪ್ರತಿನಿಧಿಗಳು, ಸ್ವಯಂ ಸೇವಾ ಸಂಸ್ಥೆಗಳು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಭಾಗವಹಿಸಿ ಪೋಷಕರ ಮನವೊಲಿಸಿ ಮಕ್ಕಳನ್ನು ಶಾಲೆಗೆ ದಾಖಲಿಸುವಲ್ಲಿ ಪೂರ್ಣ ಪ್ರಮಾಣದ ಸಹಕಾರ ನೀಡಲು ತಿಳಿಸಿದರು.
ದಿನಾಂಕ:30.05.2019 ರಂದು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಬೋವಿಕಾಲೋನಿ. ತಿಪಟೂರು ಇಲ್ಲಿ ಶಾಲಾ ಪ್ರಾರಂಭೋತ್ಸವವನ್ನು ಹಮ್ಮಿಕೊಳ್ಳಲಾಯಿತು ಈ ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಕ್ಷೇತ್ರ ಸಮನ್ವಯಾಧಿಕಾರಿಗಳು, ಇ.ಸಿ.ಓ.ಗಳು, ಬಿ.ಆರ್.ಪಿ.ಗಳು, ಸಿ.ಆರ್.ಪಿ.ಗಳು ಭಾಗವಹಿಸಿ, ಶಾಲೆಯ ವತಿಯಿಂದ ಜಾಥಾ ನಡೆಸಿ, ಬಿತ್ತಿಪತ್ರಗಳನ್ನು ಹಂಚಿ ಘೋಷಣೆಗಳನ್ನು ಕೂಗುವ ಮೂಲಕ ಶಾಲೆಯ ಪ್ರಾರಂಭೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
