ಯುವಜನರು ದುಶ್ಚಟಗಳಿಂದ ದೂರವಿರಬೇಕು

ಚಿತ್ರದುರ್ಗ :

    ದೇಶದ ಭವಿಷ್ಯವಾಗಿರುವ ಯುವಜನತೆ ತಂಬಾಕು ಉತ್ಪನ್ನಗಳ ಸೇವನೆಯೂ ಸೇರಿದಂತೆ ದುಶ್ಚಟಗಳಿಂದ ದೂರವಿರುವಂತೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಎಸ್.ವೈ. ವಟವಟಿ ಅವರು ಹೇಳಿದರು.

      ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ, ಜಿಲ್ಲಾ ತಂಬಾಕು ನಿಯಂತ್ರಣ ಕೋಶ, ಎಸ್.ಜಿ. ಪ್ಯಾರಾ ಮೆಡಿಕಲ್ ಕಾಲೇಜ್, ಬ್ರಹ್ಮಕುಮಾರಿ ಈಶ್ವರೀಯ ವಿದ್ಯಾಲಯ ಮತ್ತು ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ಇವರ ಸಂಯುಕ್ತಾಶ್ರಯದಲ್ಲಿ ನಗರದ ಎಸ್.ಜಿ. ಪ್ಯಾರಾಮೆಡಿಕಲ್ ಕಾಲೇಜಿನಲ್ಲಿ ಏರ್ಪಡಿಸಲಾದ ವಿಶ್ವ ತಂಬಾಕು ವಿರೋಧಿ ದಿನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

       ದೇಶದ ಭವಿಷ್ಯವಾಗಿರುವ ಯುವ ಜನತೆ ತಂಬಾಕು ಉತ್ಪನ್ನಗಳ ಸೇವನೆಯಿಂದ ದೂರವಿರಬೇಕು ಮತ್ತು ತಂಬಾಕು ಉತ್ಪನ್ನಗಳಿಂದಾಗುವ ದುಷ್ಪರಿಣಾಮಗಳ ಬಗ್ಗೆ ನೆರೆ-ಹೊರೆಯವರಿಗೂ ತಿಳಿಸಿ ತಂಬಾಕು ಮುಕ್ತ ಸಮಾಜ ನಿರ್ಮಿಸಲು ಮುಂದಾಗಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಎಸ್.ವೈ. ವಟವಟಿ ಅವರು ಮನವಿ ಮಾಡಿದರು.

       ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶ ಟಿ. ಶಿವಣ್ಣ ಅವರು ಮಾತನಾಡಿ, ಈ ಕಾರ್ಯಕ್ರಮವು ಕೇವಲ ಒಂದೇ ದಿನಕ್ಕೆ ಸೀಮಿತವಾಗಬಾರದು. ತಂಬಾಕು ಉತ್ಪನ್ನಗಳ ಬಳಕೆಯಿಂದ ಆರೋಗ್ಯದ ಮೇಲೆ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ನಿತ್ಯ ಒಂದಲ್ಲ ಒಂದು ಕಾರ್ಯಕ್ರಮಗಳ ಮೂಲಕ ಜನಜಾಗೃತಿ ಮೂಡಿಸುವ ಕಾರ್ಯಕ್ರಮ ನಿರಂತರವಾಗಿ ನಡೆಯಬೇಕು ಎಂದರು.

      ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರ ಬಿ.ಎಂ. ಪ್ರಭುದೇವ್ ಅವರು, ಜಿಲ್ಲಾದ್ಯಂತ ಶಾಲಾ/ ಕಾಲೇಜುಗಳಲ್ಲಿ ತಂಬಾಕು ನಿಯಂತ್ರಣ ಕುರಿತು ಕಾರ್ಯಕ್ರಮಗಳನ್ನು ಹಾಗೂ ತಂಬಾಕು ದಾಳಿಗಳನ್ನು ಮಾಡುವ ಮೂಲಕ ಕೋಟ್ಪಾ-2003ರ ಕಾಯ್ದೆಯ ಬಗ್ಗೆ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಲ್ಲಿ ತಿಳುವಳಕೆ ಮೂಡಿಸುವ ಮೂಲಕ ತಂಬಾಕು ನಿಯಂತ್ರಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ ಎಂದರು.

        ಬ್ರಹ್ಮಕುಮಾರಿ ಈಶ್ವರೀಯ ವಿದ್ಯಾಲಯದ ಶಿವರಶ್ಮಿ ಅಕ್ಕ, ವಕೀಲರ ಸಂಘದ ಅಧ್ಯಕ್ಷ ಎಸ್. ವಿಜಯಕುಮಾರ್ ಕಾರ್ಯಕ್ರಮ ಕುರಿತು ಮಾತನಾಡಿದರು. ಎಸ್.ಜಿ. ಪ್ಯಾರಾಮೆಡಿಕಲ್ ಕಾಲೇಜು ಕಾರ್ಯದರ್ಶಿ ಸಂತೋಷ್ ಗುಡಿಮಠ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವಕೀಲರ ಸಂಘದ ಉಪಾಧ್ಯಕ್ಷ ಟಿ.ನಾಗೇಂದ್ರಪ್ಪ, ಪ್ರಧಾನ ಕಾರ್ಯದರ್ಶಿ ಬಿ.ಎಂ.ಅನಿಲ್ ಕುಮಾರ್, ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ಅಧ್ಯಕ್ಷ ಡಾ. ಹೆಚ್.ಕೆ.ಎಸ್.ಸ್ವಾಮಿ, ಪ್ಯಾರಾಮೆಡಿಕಲ್ ಕಾಲೇಜು ಪ್ರಾಂಶುಪಾಲ ಚಂದ್ರಶೇಖರ್ ವಸ್ತ್ರದ ಉಪಸ್ಥಿತರಿದ್ದರು. ಕಾರ್ಯಕ್ರಮಕ್ಕೂ ಮುನ್ನ ತಂಬಾಕು ನಿಯಂತ್ರಣ ಕುರಿತು ರೇಡಿಯೋ ಸಂವಾದ ಕಾರ್ಯಕ್ರಮದಲ್ಲಿ ಜಿಲ್ಲಾ ತಂಬಾಕು ನಿಯಂತ್ರಣಾಧಿಕಾರಿ ಡಾ|| ರೇಣುಪ್ರಸಾದ್ ಜಿ.ಪಿ, ಜಿಲ್ಲಾ ಸಲಹೆಗಾರ ಬಿ.ಎಂ. ಪ್ರಭುದೇವ್, ಕೆ.ಎಂ. ತಿಪ್ಪೇಸ್ವಾಮಿ, ಸಮಾಜ ಕಾರ್ಯಕರ್ತರು ಭಾಗವಹಿಸಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap