ಹಿರಿಯೂರು :
ತಾಲ್ಲೂಕಿನಲ್ಲಿ ಆಲಿಕಲ್ಲು ಮಳೆಗೆ ಬೆಳೆ ಕಳೆದುಕೊಂಡಿರುವ ರೈತರಿಗೆ ಸರ್ಕಾರದಿಂದ ದೊರಕಬಹುದಾದ ಪರಿಹಾರ ಕೊಡಿಸಲು ಪ್ರಾಮಾಣಿಕ ಪ್ರಯತ್ನ ನಡೆಸಲಾಗುವುದು ಎಂಬುದಾಗಿ ಶಾಸಕಿ ಪೂರ್ಣಿಮಾ ಹೇಳಿದರು.
ತಾಲ್ಲೂಕಿನ ಹೂವಿನಹೊಳೆ, ವೇಣುಕಲ್ಲುಗುಡ್ಡ, ಬ್ಯಾಡರಹಳ್ಳಿ, ಕೋಡಿಹಳ್ಳಿ, ಮ್ಯಾದನಹೊಳೆ, ಕೂಡಲಹಳ್ಳಿಯ ರೈತರ ಜಮೀನುಗಳಿಗೆ ಇತ್ತೀಚೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಗ್ರಾಮೀಣ ಪ್ರದೇಶದಲ್ಲಿ ಲಕ್ಷಾಂತರ ರೂ.ಮೌಲ್ಯದ ತೆಂಗು, ಬಾಳೆ, ಅಡಕೆ, ಪಪ್ಪಾಯ ಸೇರಿ ಬಹಳಷ್ಟು ತೋಟಗಾರಿಕೆ ಬೆಳೆಗಳು ಹಾನಿಯಾಗಿರುವುದು ಕಂಡು ಬಂದಿದೆ. ಈ ಬಗ್ಗೆ ಕೃಷಿ, ತೋಟಗಾರಿಕೆ, ಕಂದಾಯ, ಇಲಾಖೆ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅವರು ಸರ್ಕಾರಕ್ಕೆ ವರದಿ ಸಲ್ಲಿಸಿದ ನಂತರ ರೈತರ ಹಿತ ಕಾಪಾಡಲು ಅಗತ್ಯ ಕ್ರಮ ವಹಿಸಲಾಗುವುದು ಎಂದರಲ್ಲದೆ ರೈತರಿಗೆ ಹೆಚ್ಚಿನ ಬೆಳೆಹಾನಿ ಪರಿಹಾರ ನೀಡುವಂತೆ ಸರ್ಕಾರವನ್ನು ಒತ್ತಾಯಿಸುವ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಬಬ್ಬೂರು ಗ್ರಾಪಂ ಅಧ್ಯಕ್ಷ ಹೇಮಂತಯಾದವ್, ತಾಪಂ ಸದಸ್ಯ ಯಶವಂತ್, ಕೇಶವಮೂರ್ತಿ, ಹನುಮಂತರಾಯಪ್ಪ, ತಿಮ್ಮಣ್ಣ, ರಂಗಪ್ಪ, ನಿರಂಜನಮೂರ್ತಿ ಇತರರಿದ್ದರು.