ಮಧುಗಿರಿ:
ಜಿಲ್ಲೆಯಲ್ಲಿ ಆರಂಭವಾಗಿರುವ ರೈಲ್ವೆ ಕಾಮಗಾರಿ ಹಾಗೂ ನೀರಾವರಿ ಯೋಜನೆಗಳನ್ನು ಆದಷ್ಟೂ ಬೇಗಾ ಪೂರ್ಣಗೊಳಿಸಿ ಸಾರ್ವಜನಿಕರ ಅನೂಕೂಲಕ್ಕೆ ಮುಂದಾಗುವಂತೆ ನೂತನ ಸಂಸದರಾದ ಜಿ.ಎಸ್.ಬಸವರಾಜುರವರ ಗಮನಕ್ಕೆ ತರಲಾಗುವುದು ಎಂದು ಬಿಜೆಪಿ ಮುಖಂಡ ಬಾಲೇನಹಳ್ಳಿ ಶಿವಣ್ಣ ತಿಳಿಸಿದರು.
ಪಟ್ಟಣದ ನಿರೀಕ್ಷಣಾ ಮಂದಿರದಲ್ಲಿ ಭಾನುವಾರ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಜೂನ್ 4ರ ಮಂಗಳವಾರ ದಂದು ಬೆಳಗ್ಗೆ ಇತಿಹಾಸ ಪ್ರಸಿದ್ಧ ಗ್ರಾಮದೇವತೆ ಶ್ರೀ ದಂಡಿನ ಮಾರಮ್ಮ ದೇವಿಗೆ ಪೂಜೆ ಸಲ್ಲಿಸಿ ನಂತರ ಪಟ್ಟಣದ ಎಂಎನ್ಕೆ ಸಮೂದಾಯ ಭವನದಲ್ಲಿ ನೂತನವಾಗಿ ಲೋಕಸಭೆಗೆ ಆಯ್ಕೆಯಾಗಿರುವ ಸಂಸದ ಜಿ.ಎಸ್.ಬಸವರಾಜು ಹಾಗೂ ಅತೀ ಹೆಚ್ಚು ಮತಗಳನ್ನು ನೀಡಿದ ಮತದಾರರಿಗೆ ಅಭಿನಂದನಾ ಸಮಾರಂಭವನ್ನು ಏರ್ಪಡಿಸಲಾಗಿದೆ.
ಕಾರ್ಯಕ್ರಮದಲ್ಲಿ ಮಾಜಿ ಸಚಿವ ವಿ ಸೋಮಣ್ಣ ಹಾಗೂ ಜಿಲ್ಲಾ ಮಟ್ಟದ ಎಲ್ಲಾ ಬಿಜೆಪಿಯ ಜನಪ್ರತಿನಿಧಿಗಳು ಆಗಮಿಸಲಿದ್ದು ಸಾರ್ವಜನಿಕರು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಅಭಿನಂದನ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಮನವಿ ಮಾಡಿದರು.
ಇದೇ ಸಂದರ್ಭದಲ್ಲಿ ಜಿಲ್ಲಾ ಹಿಂದುಳಿದ ವರ್ಗಗಳ ಯುವ ಮೋರ್ಚ ಉಪಾಧ್ಯಕ್ಷ ಸುರೇಶ್, ತಾಲೂಕು ಬಿಜೆಪಿ ಪ್ರಧಾನ ಕಾರ್ಯದರ್ಶಿ ನಾಗೇಂದ್ರ, ಉಪಾಧ್ಯಕ್ಷ ಶ್ರೀನಿವಾಸ್, ರೈತ ಮೋರ್ಚಾ ಅಧ್ಯಕ್ಷ ಸುರೇಶ್ ರೆಡ್ಡಿ, ಮಾಜಿ ತಾಲೂಕು ಅಧ್ಯಕ್ಷ ಲಕ್ಷ್ಮೀಪತಿ, ಮುಖಂಡರಾದ ನಾಗರಾಜಪ್ಪ, ಜಯಣ್ಣ, ಸೀತರಾಮು, ರವಿ, ಪಾಪಣ್ಣ, ಶಿವಲಿಂಗ, ನಾಗರಾಜು ಮುಂತಾದವರು ಹಾಜರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
