ನವದೆಹಲಿ :
ವೈದ್ಯ ಹಾಗೂ ದಂತ ವೈದ್ಯ ಕೋರ್ಸ್ಗಳ ಪ್ರವೇಶಕ್ಕೆ ಅವಕಾಶ ಕಲ್ಪಿಸುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ(ನೀಟ್) ಫಲಿತಾಂಶ ಪ್ರಕಟವಾಗಿದೆ. ಡಿ.ಕೆ.ಫಣೀಂದ್ರ ರಾಜ್ಯಕ್ಕೆ ಮೊದಲ ಸ್ಥಾನ ಗಳಿಸಿದ್ದಾರೆ.
ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್ಟಿಎ) ಇಂದು ಫಲಿತಾಂಶ ಪ್ರಕಟಿಸಿದ ಫಲಿತಾಂಶದಲ್ಲಿ ರಾಜಸ್ಥಾನದ ನಳೀನ್ ದೇಶಕ್ಕೆ ಪ್ರಥಮ ಗಳಿಸಿದ್ದರೇ, ಫಣೀಂದ್ರ ರಾಜ್ಯಕ್ಕೆ ಮೊದಲ ಸ್ಥಾನ ಗಳಿಸಿದ್ದಾರೆ.
ಇನ್ನೂ ದೆಹಲಿ ಮೂಲದ ಭವೀಕ್ ಬನ್ಸಾಲ್ ಮತ್ತು ಉತ್ತರ ಪ್ರದೇಶದ ಅಕ್ಷತ್ ಕೌಶಿಕದ 2 ಮತ್ತು 3 ನೇ ಸ್ಥಾನ ಗಳಿಸಿದ್ದಾರೆ.ಫಣೀಂದ್ರ ಡಿ ಕೆ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ಪ್ರಗ್ಯಾ ಮಿತ್ರ ಎರಡನೇ ಸ್ಥಾನ ಪಡೆದಿದ್ದಾರೆ. ಫಣೀಂದ್ರ ದೇಶದಲ್ಲಿ 36 ನೇ Rank ಪಡೆದಿದ್ದಾರೆ.
ದೇಶಾದ್ಯಂತ ಮೇ 5 ರಂದು 156 ಕೇಂದ್ರಗಳಲ್ಲಿ ನೀಟ್ ಪರೀಕ್ಷೆಯನ್ನು ನಡೆಸಲಾಗಿತ್ತು. ಈ ಬಾರಿ 15,19,375 ಮಂದಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಆನ್ಲೈನ್ನಲ್ಲಿ ರಿಜಿಸ್ಟರ್ ಮಾಡಿದ್ದರು. ಅಂತಿಮವಾಗಿ 14,10,754 ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದರು. ಕರ್ನಾಟಕದಲ್ಲಿ ಹಂಪಿ ಎಕ್ಸ್ಪ್ರೆಸ್ ರೈಲು ವಿಳಂಬ ಕಾರಣ ಮತ್ತು ಒಡಿಶಾ ಹಾಗೂ ಪಶ್ಚಿಮ ಬಂಗಾಳದಲ್ಲಿ ಫನಿ ಚಂಡಮಾರುತದ ಪರಿಣಾಮದಿಂದಾಗಿ ಈ ಎರಡು ರಾಜ್ಯಗಳಲ್ಲಿ ಮೇ 20 ರಂದು ನೀಟ್ ಮರು ಪರೀಕ್ಷೆ ನಡೆಸಲಾಗಿತ್ತು.
ಫಲಿತಾಂಶದಲ್ಲಿ ರಾಜಸ್ಥಾನ ಮೊದಲು, ದೆಹಲಿ ದ್ವಿತೀಯ ಹಾಗೂ ಆಂಧ್ರಪ್ರದೇಶ ಮೂರನೇ ಸ್ಥಾನ ಪಡೆದಿದೆ. ಕರ್ನಾಟಕ ರಾಜ್ಯ ಶೇ.63.51 ರಷ್ಟು ಫಲಿತಾಂಶ ಪಡೆದುಕೊಂಡಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ