ಕೌಟುಂಬಿಕ ಕಲಹದಿಂದ ಐಟಿಪಿಎಲ್ ಉದ್ಯೋಗಿ ಸಾವು …!!

 ಬೆಂಗಳೂರು

      ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಐಟಿಪಿಎಲ್ ಉದ್ಯೋಗಿಯೊಬ್ಬರು ನೇಣಿಗೆ ಶರಣಾಗಿರುವ ದುರ್ಘಟನೆ ಕೆಆರ್‍ಪುರಂ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಮೇಡಹಳ್ಳಿಯಲ್ಲಿ ಗುರುವಾರ ರಾತ್ರಿ ನಡೆದಿದೆ.ಮೇಡಹಳ್ಳಿಯ ವಿನಾಯಕ ಲೇಔಟ್‍ನ ದಿನೇಶ್ ಕುಮಾರ್ (31)ಎಂದು ಆತ್ಮಹತ್ಯೆ ಮಾಡಿಕೊಂಡವರನ್ನು ಗುರುತಿಸಲಾಗಿದೆ .

     ಐಟಿಪಿಎಲ್‍ನ ಖಾಸಗಿ ಕಂಪನಿಯೊಂದರಲ್ಲಿ ಉದ್ಯೋಗಿಯಾಗಿದ್ದ ದಿನೇಶ್ ಕುಮಾರ್ ರಾತ್ರಿ 7ರ ವೇಳೆ ಕೆಲಸ ಮುಗಿಸಿಕೊಂಡು ಮನೆಗೆ ಬಂದಿದ್ದಾರೆ.

       ಅದಾದ ಕೆಲವೇ ಸಮಯದಲ್ಲಿ ಫ್ಯಾನಿಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಎಷ್ಟುಬಾರಿ ಮೊಬೈಲ್ ಕರೆ ಮಾಡಿದರೂ ಸ್ವೀಕರಿಸದಿದ್ದರಿಂದ ಆತಂಕಗೊಂಡು ತವರಿಗೆ ಹೋಗಿದ್ದ ಪತ್ನಿ ಪಕ್ಕದ ಮನೆಯವರಿಗೆ ವಿಷಯ ತಿಳಿಸಿದ್ದಾರೆ.

       ಪಕ್ಕದ ಮನೆಯವರು ಬಾಗಿಲು ಮುರಿದು ಒಳಹೋಗಿ ನೋಡಿದಾಗ ದಿನೇಶ್ ಕುಮಾರ್ ನೇಣಿಗೆ ಶರಣಾಗಿದ್ದರು. ಪ್ರಕರಣ ದಾಖಲಿಸಿರುವ ಕೆ.ಆರ್. ಪುರಂ ಪೊಲೀಸರು, ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದಿನೇಶ್ ಕುಮಾರ್ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಶಂಕಿಸಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ

Recent Articles

spot_img

Related Stories

Share via
Copy link