ಬೆಂಗಳೂರು :
ರಾಜ್ಯ ಸಚಿವ ಸಂಪುಟ ಜೂ.12ರಂದು ವಿಸ್ತರಣೆಯಾಗಲಿದ್ದು, ಅಂದು ಬೆಳಗ್ಗೆ 11:30ಕ್ಕೆ ರಾಜಭವನದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಮೂವರು ಸಚಿವರುಗಳು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ರಾಜ್ಯದ ಮೈತ್ರಿ ಸರ್ಕಾರ ಉಳಿಸಿಕೊಳ್ಳಲು ಪ್ರಯತ್ನಿಸುತ್ತಿರುವ ಕಾಂಗ್ರೆಸ್-ಜೆಡಿಎಸ್ ನಾಯಕರು ಕೊನೆಗೂ ಸಚಿವ ಸಂಪುಟ ವಿಸ್ತರಣೆಗೆ ಮುಂದಾಗಿದ್ದು, ಸಿಎಂ ಕುಮಾರಸ್ವಾಮಿ ಅವರು ಇಂದು ದಿಢೀರನೆ ರಾಜ್ಯಪಾಲ ವಜುಭಾಯಿ ವಾಲಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದು, ಸಂಪುಟ ವಿಸ್ತರಣೆ ಕುರಿತು ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.
ಇಬ್ಬರು ಪಕ್ಷೇತರ ಶಾಸಕರಾದ ನಾಗೇಶ್ ಮತ್ತು ಶಂಕರ್ ಅವರನ್ನು ಸಚಿವರನ್ನಾಗಿ ಮಾಡಲು ಸಮನ್ವಯ ಸಮಿತಿ ಮುಖ್ಯಸ್ಥ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಸಲಹೆ ನೀಡಿರುವ ಹಿನ್ನೆಲೆಯಲ್ಲಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸಂಪುಟ ವಿಸ್ತರಿಸುವ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ.
ಈ ಬುಧವಾರ (ಜೂನ್ 05) ರಂದೇ ಸಚಿವ ಸಂಪುಟ ವಿಸ್ತರಣೆಗೆ ದಿನಾಂಕ ನಿಗದಿ ಮಾಡಲಾಗಿತ್ತು, ಆದರೆ ರಾಜಕೀಯ ಕಾರಣಗಳಿಗಾಗಿ ಈ ಬುಧವಾರದಂದು ಸಂಪುಟ ವಿಸ್ತರಣೆ ಆಗಲಿಲ್ಲ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ