ಬೆಂಗಳೂರು
ನಾಳೆ ರೈತರಿಂದ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಯಲಿದ್ದು . ರೈತರ ಪ್ರತಿಭಟನೆಯಿಂದಾಗಿ ಹೆದ್ದಾರಿಗಳಲ್ಲಿ ವಾಹನ ಸಂಚಾರಕ್ಕೆ ತೊಂದರೆ ಉಂಟಾಗುವ ನಿರೀಕ್ಷೆ ಇದೆ. ಭೂ ಸ್ವಾಧೀನ ಕಾಯ್ದೆ ತಿದ್ದುಪಡಿ ವಿರೋಧಿಸಿ ರೈತ ಸಂ ಘಟನೆಗಳು ಜೂನ್ 10ರ ಸೋಮವಾರ ಪ್ರತಿಭಟನೆ ನಡೆಸಲಿವೆ. ರಾಜ್ಯದಲ್ಲಿರುವ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಪ್ರತಿಭಟನೆ ನಡೆಯಲಿದ್ದು, ವಾಹನ ಸಂಚಾರಕ್ಕೆ ಅಡಚಣೆಯಾಗಲಿದೆ.
ರಾಜ್ಯದಲ್ಲಿ ಒಟ್ಟು 8 ಕಡೆ ರಾಷ್ಟ್ರೀಯ ಹೆದ್ದಾರಿಯನ್ನು ತಡೆದು ರೈತರು ಪ್ರತಿಭಟನೆ ನಡೆಸಲಿದ್ದಾರೆ. ಈ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶವನ್ನು ವ್ಯಕ್ತಪಡಿಸಲಿದ್ದಾರೆ. ಪ್ರತಿಭಟನೆಯನ್ನು ಯಾವುದೇ ಕಾರಣಕ್ಕೂ ವಾಪಸ್ ಪಡೆಯುವುದಿಲ್ಲ ಎಂದು ರೈತರು ಸ್ಪಷ್ಟಪಡಿಸಿದ್ದಾರೆ.