ಮುಂಬೈ
ಲೋಕ ಫಲಿತಾಂಶ ಪ್ರಕಟವಾದ ನಂತರದಲ್ಲಿ ನಿರೀಕ್ಷೆಯಂತೆ ಮಹಾರಾಷ್ಟ್ರ ಕಾಂಗ್ರೆಸ್ ನ ಶಾಸಕರು ಪಕ್ಷ ತೊರೆದು ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂದು ವರದಿಗಳು ತಿಳಿಸಿವೆ ಮತ್ತು ಮಹಾರಾಷ್ಟ್ರದಲ್ಲಿ ಈ ವರ್ಷಾಂತ್ಯಕ್ಕೆ ವಿಧಾನಸಭೆ ಚುನಾವಣೆ ನಡೆಯಲಿದ್ದು, ಕಾಂಗ್ರೆಸ್ ಪಕ್ಷಕ್ಕೆ ತೀವ್ರ ಹಿನ್ನಡೆಯಾಲಿದೆ ಎಂಬ ಲೆಕ್ಕಾಚಾರ ಶುರುವಾಗಿದೆ. ಕಾಂಗ್ರೆಸ್ ಅಷ್ಟೇ ಅಲ್ಲದೆ ಎನ್ ಸಿ ಪಿ ನಾಯಕರೂ ಕೂಡಾ ಬಿಜೆಪಿ ಸೇರುವ ಇಂಗಿತ ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್ನಿಂದ ಉಚ್ಚಾಟನೆಗೊಂಡ ಶಾಸಕ ಅಬ್ದುಲ್ ಸತ್ತಾರ್ ಅವರು ಬಿಜೆಪಿ ಸೇರುವ ಸುಳಿವು ಸಿಕ್ಕಿದೆ. ಕಾಂಗ್ರೆಸ್ಸಿನಿಂದ ಅಸಮಾಧಾನಗೊಂಡಿರುವ ನಾಯಕ ರಾಧಾಕೃಷ್ಣ ವಿಖೆ ಪಾಟೀಲ್ ಅವರು ಬಿಜೆಪಿ ಸೇರುವುದು ಖಚಿತವಾಗಿದೆ.
ಸುಮಾರು 25 ಶಾಸಕರು ಸದ್ಯ ಬಿಜೆಪಿ ಸೇರಲು ಉತ್ಸುಕರಾಗಿದ್ದಾರೆ, ಈ ಬಗ್ಗೆ ಮಾತುಕತೆ ಜಾರಿಯಲ್ಲಿದೆ ಎಂದು ಮಹಾರಾಷ್ಟ್ರದ ಜಲ ಸಂಪನ್ಮೂಲ ಸಚಿವ ಗಿರೀಶ್ ಮಹಾಜನ್ ಹೇಳಿದ್ದಾರೆ. ಲೋಕಸಭೆ ಚುನಾವಣೆ ವೇಳೆಯಲ್ಲಿ ಟಿಕೆಟ್ ಹಂಚಿಕೆಯಿಂದ ಅನೇಕ ಕಾಂಗ್ರೆಸ್ಸಿಗರು ಬೇಸರಗೊಂಡಿದ್ದಾರೆ. ಕಾಂಗ್ರೆಸ್ ಹಾಗೂ ಎನ್ ಸಿಪಿ ನಡುವಿನ ತಿಕ್ಕಾಟದ ಲಾಭ ಬಿಜೆಪಿಗೆ ಸಿಗುವ ಲಕ್ಷಣಗಳಿವೆ.