ಬೆಂಗಳೂರು :
ಬೆಂಗಳೂರಿನಲ್ಲಿ ವ್ಹೀಲಿಂಗ್ ಮಾಡುತ್ತಿದ್ದ ಬೈಕ್ ಸವಾರರಿಗೆ ಬೆಂಗಳೂರು ಉತ್ತರ ವಿಭಾಗದ ಸಂಚಾರ ಪೊಲೀಸರು ಶಾಕ್ ನೀಡಿದ್ದು, 13 ಸವಾರರನ್ನು ವಶಕ್ಕೆ ಪಡೆದಿದ್ದಾರೆ.
ಶನಿವಾರ ಹಾಗೂ ಭಾನುವಾರ ದೇವನಹಳ್ಳಿ, ಯಲಹಂಕ, ಚಿಕ್ಕಜಾಲ, ಆರ್.ಟಿ.ನಗರ ಸೇರಿ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಟ್ಟು 13 ದ್ವಿಚಕ್ರ ವಾಹನ ವಶಕ್ಕೆ ಪಡೆದಿದ್ದಾರೆ. 13 ಸವಾರರನ್ನು ಠಾಣೆಗೆ ಕರೆತಂದು ಎಚ್ಚರಿಕೆ ನೀಡಿ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಂಡಿದ್ದಾರೆ.
ದೇವನಹಳ್ಳಿ ಬಳಿ ಸ್ನೇಹಿತೆಯನ್ನು ಹಿಂಬದಿ ಕೂರಿಸಿಕೊಂಡು ವ್ಹೀಲಿಂಗ್ ಮಾಡಿದ ಸ್ಕೂಟರ್ ಪತ್ತೆಯಾಗಿದ್ದು, ಆಂಧ್ರದಲ್ಲಿ ತಲೆಮರೆಸಿಕೊಂಡಿರುವ ಆರೋಪಿಗಾಗಿ ಶೋಧ ಕಾರ್ಯ ಮುಂದುವರೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ