ಲಂಡನ್:
ಪಿಎನ್ ಬಿ ವಂಚನೆ ಪ್ರಕರಣ ಆರೋಪಿ ವಜ್ರದ ವ್ಯಾಪಾರಿ ನೀರವ್ ಮೋದಿಗೆ ಲಂಡನ್ ನ ರಾಯಲ್ ಕೋರ್ಟ್ ಆಫ್ ಜಸ್ಟಿಸ್ ನಾಲ್ಕನೇ ಬಾರಿ ಜಾಮೀನು ನಿರಾಕರಿಸಿದೆ.
ಪಂಜಾಬ್ ನ್ಯಾಷನಲ್ ಬ್ಯಾಂಕ್ ಗೆ 13,300 ಕೋಟಿ ರೂ ವಂಚನೆ ನಡೆಸಿರುವ ಬಗೆಗೆ ವೆಸ್ಟ್ ಮಿನಿಸ್ಟರ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ನೀರವ್ ಮೋದಿಯನ್ನು ಭಾರತಕ್ಕೆ ಹಸ್ತಾಂತರಿಸುವ ಸಂಬಂಧ ವಿಚಾರಣೆ ನಡೆಯುತ್ತಿತ್ತು. ಈ ವೇಳೆ ಪ್ರಕರಣಕ್ಕೆ ಸಂಬಂಧಿಸಿ ವಿಚಾರಣೆ ವೇಳೆ ನೀರವ್ ಮೋದಿ ಜಾಮೀನಿಗಾಗಿ ನ್ಯಾಯಾಲಯಕ್ಕೆ ಮೂರು ಬಾರಿ ಅರ್ಜಿ ಸಲ್ಲಿಸಿದ್ದರೂ ನ್ಯಾಯಾಲಯ ಜಾಮೀನು ನೀಡಲು ನಿರಾಕರಿಸಿತ್ತು.
ಇಲ್ಲಿನ ಕಾನೂನಿಗೆ ಅವರು ಬದ್ಧರಾಗಿದ್ದಾರೆ. ಮತ್ತು ಇಲ್ಲಿ ಉದ್ಯೋಗ ಮಾಡಿಕೊಂಡು, ತೆರಿಗೆ ಪಾವತಿಸುತ್ತಿದ್ದಾರೆ ಎಂದು ನೀರವ್ ಮೋದಿ ಪರ ವಕೀಲರು ವಾದ ಮಂಡಿಸಿ, ಜಾಮೀನು ನೀಡುವಂತೆ ಮನವಿ ಮಾಡಿದ್ದರು. ಆದರೆ, ಈ ವಾದವನ್ನು ತಳ್ಳಿಹಾಕಿದ ನ್ಯಾಯಾಲಯ ಜಾಮೀನು ನಿರಾಕರಿಸಿದೆ. ಇದರಿಂದ ನೀರವ್ ಗೆ ನಿರಾಶೆಯಾಗಿದ್ದು ಮುಂದಿನ ದಿನಗಳಲ್ಲಿಯೂ ವಂಚಕ ವ್ಯಾಪಾರಿಗೆ ಜೈಲೂಟವೇ ಗತಿಯಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ