ಜೂ.14ಕ್ಕೆ ನೂತನ ಬಿಜೆಪಿ ಸಂಸದರಿಗೆ ಅಭಿನಂದನಾ ಸಮಾರಂಭ

ಗುಬ್ಬಿ

     ಪಟ್ಟಣದ ಬಾವಿಮನೆ ಕಲ್ಯಾಣ ಮಂಟಪದಲ್ಲಿ ಜೂ.14 ರಂದು ಮಧ್ಯಾಹ್ನ 2 ಗಂಟೆಗೆ ನೂತನ ಸಂಸದರಿಗೆ ಸನ್ಮಾನ ಕಾರ್ಯಕ್ರಮ ಹಾಗೂ ಮತದಾರರಿಗೆ ಅಭಿನಂದನೆ ಕಾರ್ಯಕ್ರಮವನ್ನು ಬಿಜೆಪಿ ಪಕ್ಷದ ವತಿಯಿಂದ ಏರ್ಪಡಿಸಲಾಗಿದ್ದು ಪಕ್ಷದ ಎಲ್ಲಾ ಮುಖಂಡರು, ಕಾರ್ಯಕರ್ತರು, ಸಾರ್ವಜನಿಕರು, ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ಮೂಲಕ ಸಮಾರಂಭವನ್ನು ಯಶಸ್ವಿಗೊಳಿಸುವಂತೆ ಬಿಜೆಪಿ ತಾಲ್ಲೂಕು ಅಧ್ಯಕ್ಷ ಅ.ನಾ. ಲಿಂಗಪ್ಪ ತಿಳಿಸಿದರು.

    ಪಟ್ಟಣದ ಪ್ರವಾಸಿ ಮಂದಿರದಲ್ಲಿ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತುಮಕೂರು ಲೋಕಸಭಾ ಕ್ಷೇತ್ರದ ಮತದಾರರು ಉತ್ತಮ ಸಹಕಾರ ನೀಡಿದ್ದಾರೆ. ರಾಜ್ಯದ ಎಲ್ಲರ ಕಣ್ಣು ತುಮಕೂರು ಕ್ಷೇತ್ರದ ಮೇಲೆಯೇ ಇತ್ತು. ಇಂತಹ ಸಂದರ್ಭದಲ್ಲಿ ನೀರಾವರಿ ಹೋರಾಟಗಾರರಾದ ಜಿ.ಎಸ್.ಬಸವರಾಜುರವರು ಅಧಿಕ ಮತಗಳ ಅಂತರದಿಂದ ಗೆಲುವು ಪಡೆದಿದ್ದಾರೆ. ಅವರ ಗೆಲುವಿಗೆ ಸಂಪೂರ್ಣ ಸಹಕಾರ ನೀಡಿದ ಜಿಲ್ಲೆಯ ಮತದಾರರಿಗೆ ಪಕ್ಷದ ವತಿಯಿಂದ ಅಭಿನಂದನೆ ಸಲ್ಲಿಸಿದರು.

      ಬಿಜೆಪಿ ಹಿಂದುಳಿದ ವರ್ಗದ ಜಿಲ್ಲಾ ಅಧ್ಯಕ್ಷ ಜಿ.ಎನ್.ಬೆಟ್ಟಸ್ವಾಮಿ ಮಾತನಾಡಿ ಜಿಲ್ಲೆಯ ಸಮಗ್ರ ಅಭಿವೃದ್ಧಿ ಸೇರಿದಂತೆ ನೀರಾವರಿ ಯೋಜನೆಗಳಿಗೆ ತಮ್ಮನ್ನು ತಾವು ತೊಡಗಿಸಿಕೊಂಡು ಅವಿರತ ಹೋರಾಟ ಮಾಡುತ್ತಿರುವ ನೀರಾವರಿ ಹರಿಕಾರರಾದ ನೂತನ ಸಂಸದರಾದ ಜಿ.ಎಸ್.ಬಸವರಾಜು ಅವರನ್ನು ಜಿಲ್ಲೆಯ ಮತದಾರರು ಅತ್ಯಧಿಕ ಮತಗಳಿಂದ ಗೆಲ್ಲಿಸಿರುವುದು ಅಭಿನಂದನಾರ್ಹ ವಾದುದಾಗಿದ್ದು, ಅಧಿಕ ಮತಗಳಿಂದ ಗೆಲುವು ತಂದುಕೊಟ್ಟ ಮತದಾರರು, ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರನ್ನು ಅಭಿನಂದಿಸುತ್ತಿರುವುದಾಗಿ ತಿಳಿಸಿದರು.

     ಈ ಕಾರ್ಯಕ್ರಮಕ್ಕೆ ಜಿಲ್ಲೆಯ ಬಿಜೆಪಿ ಶಾಸಕರು ಹಾಗೂ ಮುಖಂಡರುಗಳು ಆಗಮಿಸುತ್ತಿದ್ದಾರೆ. ಪಕ್ಷದ ಮುಖಂಡರು, ಕಾರ್ಯಕರ್ತರು ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ಮೂಲಕ ಸಮಾರಂಭವನ್ನು ಯಶಸ್ವಿಗೊಳಿಸುವಂತೆ ಮನವಿ ಮಾಡಿದರು.

      ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಸಾಗರನಹಳ್ಳಿ ವಿಜಯಕುಮಾರ್ ಮಾತನಾಡಿ, ಜಿಲ್ಲೆಗೆ ಯಾವ ಸಂಸದರು ಬೇಕಾಗಿದೆ ಎಂಬುದನ್ನು ಅರಿತಿರುವ ಜಿಲ್ಲೆಯ ಜನತೆ ನಮ್ಮ ನಾಯಕರಿಗೆ ಅಧಿಕ ಮತ ನೀಡಿ ಗೆಲುವು ತಂದುಕೊಟ್ಟಿದ್ದಾರೆ. ಜಿಲ್ಲೆಯ ವಿಚಾರದಲ್ಲಿ ನಮ್ಮೆಲ್ಲ 4 ಶಾಸಕರು ಸಹ ಹೋರಾಟ ಮಾಡಲು ಬದ್ದರಾಗಿದ್ದಾರೆ ಎತ್ತಿನಹೊಳೆ ಯೋಜನೆ ನಮ್ಮ ಭಾಗದಲ್ಲಿ ಹೋಗುತ್ತದೆ ಎಂದ ಮೇಲೆ ನಮಗೂ ಅಲ್ಲಿ ನೀರು ಹರಿಯಬೇಕು ಎಂದು ನಮ್ಮ ಇಬ್ಬರು ಶಾಸಕರು ಹೋರಾಟಕ್ಕೆ ಸಿದ್ದರಾಗಿದ್ದಾರೆ

      ಜಿ.ಎಸ್.ಬಸವರಾಜುರವರು 5 ಭಾರಿ ಸಂಸದರಾಗಿದ್ದು ಇಡಿ ಜಿಲ್ಲೆಯ ಚಿತ್ರಣ ಅವರಿಗೆ ಇದೆ ಕೇಂದ್ರದಲ್ಲಿ ಮೋದಿಯವರ ಸರಕಾರದಲ್ಲಿ ಹೆಚ್ಚಿನ ಅನುದಾನ ತಂದು ಜಿಲ್ಲೆಯ ಸಮಗ್ರ ಚಿತ್ರಣ ಬದಲು ಮಾಡಲು ಯೋಜನೆ ರೂಪಿಸಿದ್ದಾರೆ. ಆದ್ದರಿಂದ ಸಂಸದರ ಅಭಿನಂದನಾ ಸಮಾರಂಭಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮ ಯಶಸ್ವಿ ಮಾಡಬೇಕು ಎಂದು ತಿಳಿಸಿದರು.

      ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಪಂಚಾಯತ್ ಸದಸ್ಯ ಜಿ.ಹೆಚ್.ಜಗನ್ನಾಥ್, ಪಟ್ಟಣ ಪಂಚಾಯ್ತಿ ಸದಸ್ಯರಾದ ಜಿ.ಆರ್.ಶಿವಕುಮಾರ್, ಜಿ.ಸಿ.ಕೃಷ್ಣಮೂರ್ತಿ, ಜಿ.ಎನ್.ಅಣ್ಣಪ್ಪಸ್ವಾಮಿ, ಮುಖಂಡರಾದ ಪಿ.ಬಿ.ಚಂದ್ರಶೇಖರ್‍ಬಾಬು, ಎನ್.ಸಿ.ಪ್ರಕಾಶ್, ಕೆ.ಬಿ.ಕೃಷ್ಣಪ್ಪ, ಎಸ್.ನಂಜೇಗೌಡ, ಪ್ರಸನ್ನಕುಮಾರ್, ಕೆಂಪರಾಜು, ಬಸವರಾಜು ಮುಂತಾದವರು ಉಪಸ್ಥಿತರಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ

Recent Articles

spot_img

Related Stories

Share via
Copy link