ಮೈಸೂರು:
ನಾನು ಸತ್ಯ ಹೇಳಲಾಗದಂತಹ ಪರಿಸ್ಥಿತಿಯಲ್ಲಿದ್ದೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.
ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಪ್ರಧಾನಿ ಮೋದಿ, ಅಮಿತ್ ಶಾ ಅವರ ಸತ್ಯದ ಬಗ್ಗೆ ನಾವು ಮಾತನಾಡುವ ಹಾಗೇ ಇಲ್ಲ. ಸತ್ಯ ಹೇಳಲಾಗದಂತಹ ಕಷ್ಟದ ಪರಿಸ್ಥಿತಿಯಲ್ಲಿ ನಾವಿದ್ದೇವೆ. ಪುಲ್ವಾಮಾ ಘಟನೆ ಬಗ್ಗೆಯೂ ನಾವು ಪ್ರಶ್ನೆ ಕೇಳುವಂತಿಲ್ಲ. ನೋಡಿ ನಮ್ಮ ಪರಿಸ್ಥಿತಿ ಹೀಗಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
5 ವರ್ಷದ ಪ್ರಧಾನಿ ಮೋದಿ ಅವರ ಸರ್ಕಾರವನ್ನು ದೇಶದ ಜನರು ಹಾಡಿ ಹೊಗಳಿದ್ದಾರೆ. ಆದರೆ ಜಿಡಿಪಿ ಐದು ವರ್ಷದಲ್ಲಿ ಪಾತಾಳಕ್ಕೆ ಹೋಗಿದೆ. ನಿರುದ್ಯೋಗ ಸಮಸ್ಯೆ, ರೂಪಾಯಿ ಮೌಲ್ಯ ಕುಸಿದಿದೆ. ಆದರೆ ಮೋದಿ ಮೋದಿ ಎನ್ನುತ್ತಾರೆ. ಐದು ವರ್ಷದಲ್ಲಿ ದೇಶದ ಆರ್ಥಿಕ ಪರಿಸ್ಥಿಯನ್ನು ಸುಧಾರಿಸಿಲ್ಲ. ಬರೀ ಭಾಷಣ, ಸುಳ್ಳು, ನಾಟಕ ಇವುಗಳಿಂದ ಕಾಲಕಳೆದಿದ್ದಾರೆ ಎಂದು ಬಿಜೆಪಿ ಸರ್ಕಾರದ ಬಗ್ಗೆ ವ್ಯಂಗ್ಯವಾಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ